3 ಯೆಹೂದನಿಗೆ ಏರ್, ಓನಾನ್ ಮತ್ತು ಶೇಲಾಹ ಎಂಬ ಮೂರು ಮಕ್ಕಳು ಶೂನನ ಮಗಳಾದ ಕಾನಾನಳಿಂದ ಹುಟ್ಟಿದರು. ಯೆಹೂದನ ಚೊಚ್ಚಲ ಮಗನಾದ ಏರನು ಯೆಹೋವನ ಚಿತ್ತಕ್ಕೆ ವಿರೋಧವಾಗಿ ನಡೆದುಕೊಂಡದ್ದರಿಂದ ಯೆಹೋವನು ಅವನನ್ನು ಕೊಂದು ಹಾಕಿದನು. 4 ಯೆಹೂದನ ಸೊಸೆಯಾದ ತಾಮಾರಳು ಅವನಿಂದ ಪೆರೆಚ್ ಮತ್ತು ಜೆರಹ ಎಂಬವರನ್ನು ಹೆತ್ತಳು.
5 ಯೆಹೂದನಿಗೆ ಐದು ಮಕ್ಕಳು. ಪೆರೆಚನ ಮಕ್ಕಳು ಹೆಚ್ರೋನ್ ಮತ್ತು ಹಮೂಲ್. 6 ಜೆರಹನ ಐದು ಮಕ್ಕಳು ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ. 7 ಯೆಹೋವನಿಗೆ ಮೀಸಲಾದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲ್ಯರನ್ನು ಆಪತ್ತಿಗೆ ಗುರಿಮಾಡಿದ [a]ಆಕಾರನು ಕರ್ಮೀಯನ ಮಗನು. 8 ಏತಾನನ ಮಗನು ಅಜರ್ಯನು. 9 ಹೆಚ್ರೋನನ ಮಕ್ಕಳು ಯೆರಹ್ಮೇಲನು, ರಾಮ್ ಮತ್ತು ಕೆಲೂಬಾಯ್ ಎಂಬುವರು.
21 ಹೆಚ್ರೋನನು ಅರವತ್ತು ವರ್ಷದವನಾದಾಗ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಮಗಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಂದ ಸೆಗೂಬನನ್ನು ಪಡೆದಳು. 22 ಸೆಗೂಬನು ಯಾಯೀರನನ್ನು ಪಡೆದನು; ಇವನಿಗೆ ಗಿಲ್ಯಾದ್ ದೇಶದಲ್ಲಿ ಇಪ್ಪತ್ತ್ಮೂರು ಪಟ್ಟಣಗಳು ಇದ್ದವು. 23 ಗೆಷೂರ್ಯರು ಮತ್ತು ಅರಾಮ್ಯರು ಯಾಯೀರನ ಸಂತಾನದವರಿಂದ ಯಾಯೀರಿನ ಗ್ರಾಮಗಳನ್ನೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನು, ಒಟ್ಟು ಅರವತ್ತು ಸಂಸ್ಥಾನಗಳನ್ನು ಗೆದ್ದುಕೊಂಡರು. ಈ ಸಂಸ್ಥಾನದವರೆಲ್ಲರೂ ಗಿಲ್ಯಾದ್ಯರ ಮೂಲಪುರುಷನಾದ ಮಾಕೀರನ ಗೋತ್ರದವರು. 24 ಹೆಚ್ರೋನನು ಕಾಲೇಬನ ಎಫ್ರಾತದಲ್ಲಿ ಮರಣಹೊಂದಿದ ನಂತರ ಅವನ ಹೆಂಡತಿಯಾದ ಅಬೀಯ ಎಂಬಾಕೆಯು ಅಷ್ಹೂರನನ್ನು ಹೆತ್ತಳು. ಇವನು ತೆಕೋವದವರ ಮೂಲಪುರುಷನು.
34 ಶೇಷಾನನಿಗೆ ಹೆಣ್ಣು ಮಕ್ಕಳಿದ್ದರೇ ಹೊರತು ಗಂಡು ಮಕ್ಕಳಿರಲಿಲ್ಲ. ಇದಲ್ಲದೆ ಅವನಿಗೆ ಯರ್ಹನೆಂಬ ಒಬ್ಬ ಐಗುಪ್ತ ಸೇವಕನಿದ್ದನು. 35 ಶೇಷಾನನು ತನ್ನ ಮಗಳನ್ನು ಸೇವಕನಾದ ಯರ್ಹನಿಗೆ ಮದುವೆಮಾಡಿಕೊಟ್ಟನು. ಆಕೆಯು ಅವನಿಂದ ಅತ್ತೈಯನ್ನು ಹೆತ್ತಳು. 36 ಅತ್ತೈ ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು. 37 ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು. 38 ಓಬೇದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು. 39 ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು. 40 ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು. 41 ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನನು ಎಲೀಷಾಮನನ್ನು ಪಡೆದನು.
46 ಕಾಲೇಬನ ಉಪಪತ್ನಿಯಾದ ಏಫಳಲ್ಲಿ ಹಾರಾನ್, ಮೋಚ ಮತ್ತು ಗಾಜೇಜ್ ಎಂಬುವವರು ಹುಟ್ಟಿದರು. 47 ಹಾರಾನನು ಗಾಜೇಜನನ್ನು ಪಡೆದನು. ಯಾದೈಯಳಲ್ಲಿ ರೆಗೆಮ್, ಯೋತಾಮ್, ಗೇಷಾನ್, ಪೆಲೆಟ್, ಏಫ ಮತ್ತು ಶಾಫ್ ಎಂಬುವವರು ಹುಟ್ಟಿದರು. 48 ಕಾಲೇಬನ ಉಪಪತ್ನಿಯಾದ ಮಾಕಳಲ್ಲಿ ಶೆಬೆರ್ ಮತ್ತು ತಿರ್ಹನ್ ಎಂಬುವವರು ಹುಟ್ಟಿದರು. 49 ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್; ಮಕ್ಬೇನಾ ಮತ್ತು ಗಿಬ್ಯ ಪಟ್ಟಣದವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಷಾ. 50 ಕಾಲೇಬನ ಹೆಂಡತಿಯಾದ ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಕ್ಕಳು ಕಿರ್ಯತ್ಯಾರೀಮರ ಮೂಲಪುರುಷನಾದ ಶೋಬಾಲ್, 51 ಬೇತ್ಲೆಹೇಮ್ಯರ ಮೂಲಪುರುಷನಾದ ಸಲ್ಮ ಮತ್ತು ಬೇತ್ಗಾದೇರಿನ ಮೂಲಪುರುಷನಾದ ಹಾರೇಫ್. 52 ಕಿರ್ಯತ್ಯಾರೀಮಿನ ಮೂಲಪುರುಷನಾದ ಶೋಬಾಲನ ಸಂತಾನದವರು ಹಾರೋಯೆ, ಮಾನಹತಿಯರ ಅರ್ಧ ಜನರು, 53 ಕಿರ್ಯತ್ಯಾರೀಮ್ ಕುಟುಂಬಗಳವರು, ಯೆತೆರಿನವರು, ಪೂತ್ಯರು, ಶುಮಾತ್ಯರು ಮತ್ತು ಮಿಷ್ರಾಗ್ಯರು ಇವರೇ. ಇವರಿಂದ ಹುಟ್ಟಿದ ಜನಾಂಗ ಚೊರ್ರಾತ್ಯರೂ ಮತ್ತು ಎಷ್ಟಾವೋಲ್ಯರೂ. 54 ಸಲ್ಮನಿಂದ ಬೇತ್ಲೆಹೇಮ್, ನೆಟೋಫಾ, ಅಟರೋತ್, ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಹುಟ್ಟಿದರು. 55 ಯಾಬೇಚಿನಲ್ಲಿ ವಾಸಿಸುವ ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ಬರೆಯುವುದರಲ್ಲೂ ಮತ್ತು ಪ್ರತಿಗಳನ್ನು ಮಾಡುವುದರಲ್ಲೂ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು ಮತ್ತು ಸೂಕಾತ್ಯರು, ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮತನಿಂದ ಹುಟ್ಟಿದ ಕೇನ್ಯರು.
<- 1 ಪೂರ್ವಕಾಲವೃತ್ತಾಂತ 11 ಪೂರ್ವಕಾಲವೃತ್ತಾಂತ 3 ->- a ಆಕಾರ ದೇವರಿಗೆ ಸಮರ್ಪಿಸಲ್ಪಟ್ಟಿದ್ದ ಕೊಳ್ಳೆಯ ವಸ್ತುಗಳನ್ನು ಕದ್ದು ಬಚ್ಚಿಡುವ ಮೂಲಕ ಇವನು ಇಸ್ರಾಯೇಲ್ಯರ ಮೇಲೆ ಕೇಡನ್ನು ಬರಮಾಡಿದನು. ಯೆಹೋಶುವ ಅಧ್ಯಾಯ 7 ನೋಡಿರಿ.