1 ಆರೋನನ ಸಂತಾನದವರೂ ವರ್ಗಗಳಾಗಿ ವಿಭಾಗಿಸಲ್ಪಟ್ಟರು. ಆರೋನನ ಮಕ್ಕಳು ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವರು. 2 ನಾದಾಬ್ ಮತ್ತು ಅಬೀಹೂ ಎಂಬುವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತು ಹೋದುದರಿಂದ ಎಲ್ಲಾಜಾರನೂ, ಈತಾಮಾರನೂ ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು. 3 ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು. 4 ಎಲ್ಲಾಜಾರನ ಸಂತಾನದ ಕುಟುಂಬ ಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡು ಬಂದುದರಿಂದ ಎಲ್ಲಾಜಾರರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ, ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ, 5 ಈ ವರ್ಗಗಳ ವಿಷಯವಾಗಿ ಚೀಟು ಹಾಕಿದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯದ ಅಧಿಪತಿಗಳು, ದೈವಿಕ ಕಾರ್ಯಗಳ ಅಧ್ಯಕ್ಷರೂ ಇರುವುದರಿಂದ ಉಭಯ ಸಂತಾನದವರು ಸಮಾನ ಸ್ಥಾನದವರಾಗಿದ್ದರು. 6 ನೆತನೇಲನ ಮಗನಾದ ಶೆಮಾಯನೆಂಬ ಲೇವಿಯ ಲೇಖಕನು ಅರಸನ ಮುಂದೆಯೂ, ಅಧಿಪತಿಗಳು, ಯಾಜಕನಾದ ಚಾದೋಕ್, ಎಬ್ಯಾತಾರನ ಮಗನಾದ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರು ಇವರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರನ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸಬೇಕೆಂದು ನೇಮಿಸಿ ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
20 ಉಳಿದ ಲೇವಿಯರ ಪಟ್ಟಿ. ಅಮ್ರಾಮನ ಸಂತಾನದವರಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು. 21 ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನೂ, 22 ಇಚ್ಹಾರನ ಸಂತಾನದ ಶೆಲೋಮೋತನ ಕುಟುಂಬದವರಲ್ಲಿ ಯಹತನೂ ಪ್ರಧಾನರು. 23 ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು, 24 ಉಜ್ಜೀಯೇಲನ ಮಗನಾದ ಮೀಕನ ಸಂತಾನದವರಲ್ಲಿ ಶಾಮೀರನೂ, 25 ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಪ್ರಧಾನರು. 26 ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬುವವರು. ಅವನ ಮತ್ತೊಬ್ಬ ಮಗನಾದ ಯಾಜ್ಯನ ವಂಶದವನು ಬೆನೋ. 27 ಮೆರಾರೀಯ ಸಂತಾನದವರಲ್ಲಿ ಯಾಜ್ಯ, ಬೆನೋ, ಶೋಹಮ್, ಜಕ್ಕೂರ್ ಮತ್ತು ಇಬ್ರೀ ಇವರೇ. 28 ಮಹ್ಲೀಯನ ಮಗನಾದ ಎಲ್ಲಾಜಾರನೂ ಮಕ್ಕಳಿಲ್ಲದೆ ಸತ್ತನು. 29 ಕೀಷನಿಂದ ಯೆರಹ್ಮೇಲನು ಹುಟ್ಟಿದನು. 30 ಮೂಷೀಯನ ಮಕ್ಕಳು ಮಹ್ಲೀ, ಏದೆರ್ ಮತ್ತು ಯೆರೀಮೋತ್ ಎಂಬುವವರು.
31 ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ, ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ ಚಾದೋಕ್ ಅಹೀಮೆಲೆಕ್ ಇವರ ಮುಂದೆಯೂ, ಯಾಜಕರ ಮತ್ತು ಲೇವಿಯರ ಕುಟುಂಬ ಪ್ರಧಾನರ ಮುಂದೆಯೂ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.