22 ಕೆಹಾತನ ಸಂತಾನದವರು: ಇವನ ಮಗ ಅಮ್ಮೀನಾದಾಬ್, ಇವನ ಮಗ ಕೋರಹ. ಕೋರಹನ ಮಗ ಅಸ್ಸೀರ್, 23 ಇವನ ಮಗ ಎಲ್ಕಾನ. ಎಲ್ಕಾನನ ಮಗ ಎಬ್ಯಾಸಾಫ್. ಇವನ ಮಗ ಅಸ್ಸೀರ್. 24 ಅಸ್ಸೀರನ ಮಗ ತಹತ್, ಇವನ ಮಗ ಊರೀಯೇಲ್. ಊರೀಯೇಲನ ಮಗ ಉಜ್ಜೀಯ, ಇವನ ಮಗ ಸೌಲ್. 25 ಎಲ್ಕಾನನ ಮಕ್ಕಳು; ಅಮಾಸೈ, ಅಹೀಮೋತ್ ಮತ್ತು ಎಲ್ಕಾನ್ ಎಂಬವರು. 26 ಎಲ್ಕಾನನ ಸಂತಾನದವರು. ಇವನ ಮಗನು, ಚೋಫೈ, ಇವನ ಮಗ ನಹತ್. 27 ನಹತನ ಮಗ ಎಲೀಯಾಬ್, ಇವನ ಮಗ ಯೆರೋಹಾಮ್, ಇವನ ಮಗ ಎಲ್ಕಾನ್. 28 ಸಮುವೇಲನ ಮಕ್ಕಳು ಯೋವೇಲ್[a] ಚೊಚ್ಚಲ ಮಗನು ಮತ್ತು ಅಬೀಯನು ಎರಡನೆಯವನು.
29 ಮೆರಾರೀಯ ಸಂತಾನದವರು. ಇವನ ಮಗ ಮಹ್ಲೀ. ಇವನ ಮಗ ಲಿಬ್ನೀ, ಇವನ ಮಗ ಶಿಮ್ಮೀ. ಶಿಮ್ಮೀಯ ಮಗನು ಉಜ್ಜ. 30 ಇವನ ಮಗನು ಶಿಮ್ಮಾ, ಇವನ ಮಗನು ಹಗ್ಗೀಯ, ಇವನ ಮಗನು ಅಸಾಯ.
33 ದೇವಾಲಯದ ಸೇವಕರೂ ಅವರ ವಂಶಾವಳಿಯೂ: ಕೆಹಾತ್ಯನಾದ ಹೇಮಾನನು ಮೊದಲನೆಯವನು. ಪ್ರಥಮ ಸಂಗೀತ ಮಂಡಳಿಯ ಗಾಯಕನಾದ ಇವನು ಯೋವೇಲನ ಮಗ, ಇವನು ಸಮುವೇಲನ ಮಗ. 34 ಸಮುವೇಲನು ಎಲ್ಕಾನನ ಮಗ. ಇವನು ಯೆರೋಹಾಮನ ಮಗ, ಯೆರೋಹಾಮನು ಎಲೀಯೇಲನ ಮಗ, ಇವನು ತೋಹನ ಮಗ. 35 ತೋಹನು ಚೂಫನ ಮಗ, ಇವನು ಎಲ್ಕಾನನ ಮಗ, ಎಲ್ಕಾನನು ಮಹತನ ಮಗ, ಮಹತನನು ಅಮಾಸೈಯ ಮಗ, ಅಮಾಸೈಯನು ಎಲ್ಕಾನನ ಮಗ. 36 ಎಲ್ಕಾನನು ಯೋವೇಲನ ಮಗ, ಇವನು ಅಜರ್ಯನ ಮಗ. ಅಜರ್ಯನು ಚೆಫನ್ಯನ ಮಗ, 37 ಇವನು ತಹತನ ಮಗ. ತಹತನು ಅಸೀರನ ಮಗ, ಅಸ್ಸೀರನು ಎಬ್ಯಾಸಾಫನ ಮಗ, ಇವನು ಕೋರಹನ ಮಗ, ಕೋರಹನು ಇಚ್ಹಾರನ ಮಗ. 38 ಇಚ್ಹಾರನು ಕೆಹಾತನ ಮಗ, ಇವನು ಲೇವಿಯನ ಮಗ, ಲೇವಿಯು ಇಸ್ರಾಯೇಲನ ಮಗ.
39 ಇವನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನಾದ ಆಸಾಫನು ಎರಡನೆಯವನು. ಇವನು ಬೆರೆಕ್ಯನ ಮಗ, ಇವನು ಶಿಮ್ಮನ ಮಗ. 40 ಶಿಮ್ಮನು ಮೀಕಾಯೇಲನ ಮಗ, ಇವನು ಬಾಸೇಯನ ಮಗ, ಬಾಸೇಯನು ಮಲ್ಕೀಯನ ಮಗ. 41 ಮಲ್ಕೀಯನು ಎತ್ನಿಯ ಮಗ, ಇವನು ಜೆರಹನ ಮಗ, ಜೆರಹನು ಅದಾಯನ ಮಗನು. 42 ಅದಾಯನು ಏತಾನನ ಮಗ, ಇವನು ಜಿಮ್ಮನ ಮಗ, ಜಿಮ್ಮನು ಶಿಮ್ಮೀಯ ಮಗ. 43 ಶಿಮ್ಮೀಯು ಯಹತನ ಮಗ, ಇವನು ಗೇರ್ಷೋಮನ ಮಗ, ಗೇರ್ಷೋಮನು ಲೇವಿಯ ಮಗ.
44 ಇವನ ಎಡಗಡೆಯಲ್ಲಿ ನಿಲ್ಲುತ್ತಿದ್ದ ಇವನ ಸಹೋದರನೂ, ಮೆರಾರಿಯನೂ ಆದ ಏತಾನನು ಮೂರನೆಯವನು. ಇವನು ಕೀಷೀಯ ಮಗ, ಇವನು ಅಬ್ದೀಯನ ಮಗ, ಇವನು ಮಲ್ಲೂಕನ ಮಗ. 45 ಮಲ್ಲೂಕನು ಹಷಬ್ಯನ ಮಗ, ಇವನು ಅಮಚ್ಯನ ಮಗ, ಇವನು ಹಿಲ್ಕೀಯನ ಮಗ. 46 ಹಿಲ್ಕೀಯನು ಅಮ್ಚೀಯನ ಮಗ, ಇವನು ಬಾನೀಯನ ಮಗ, ಬಾನೀಯು ಶೆಮೆರನ ಮಗ. 47 ಶೆಮೆರನು ಮಹ್ಲೀಯ ಮಗ, ಇವನು ಮೂಷೀಯ ಮಗ. ಮೂಷೀಯು ಮೆರಾರಿಯ ಮಗ, ಮೆರಾರಿಯು ಲೇವಿಯ ಮಗನು.
61 ಕೆಹಾತ್ಯರ ಉಳಿದ ಕುಟುಂಬಗಳಿಗೆ ಚೀಟು ಹಾಕುವುದರ ಮೂಲಕ ಮನಸ್ಸೆ ಕುಲದ ಸ್ವತ್ತಿನಿಂದ ಹತ್ತು ಪಟ್ಟಣಗಳು ದೊರಕಿದವು. 62 ಗೇರ್ಷೋಮ್ಯರ ಕುಟುಂಬಗಳಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ, ಬಾಷಾನಿನಲ್ಲಿರುವ ಮನಸ್ಸೆ ಕುಲಗಳ ಸ್ವತ್ತಿನಿಂದ ಹದಿಮೂರು ಪಟ್ಟಣಗಳು ದೊರಕಿದವು. 63 ಮೆರಾರೀ ಕುಟುಂಬಗಳಿಗೆ ರೂಬೇನ್, ಗಾದ್, ಜೆಬುಲೂನ್ ಕುಲಗಳ ಸ್ವತ್ತಿನಿಂದ ಹನ್ನೆರಡು ಪಟ್ಟಣಗಳು ಚೀಟು ಹಾಕುವುದರಿಂದ ದೊರಕಿದವು. 64 ಇಸ್ರಾಯೇಲರು ಲೇವಿಯರಿಗೆ ಆ ಪಟ್ಟಣಗಳನ್ನಲ್ಲದೆ ಅವುಗಳಿಗೆ ಸೇರಿದ ಗೋಮಾಳುಗಳನ್ನೂ ಕೊಟ್ಟರು. 65 ಅವರು ಚೀಟು ಹಾಕಿ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನನ ಕುಲಗಳಿಂದ ಮೇಲೆ ಹೇಳಿದ ಪಟ್ಟಣಗಳನ್ನೂ ಕೊಟ್ಟರು.
66 ಕೆಹಾತ್ಯರ ಕುಟುಂಬಗಳಿಗೆ ಎಫ್ರಾಯೀಮ್ಯರ ಸ್ವತ್ತಿನಿಂದ 67 ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ, 68 ಯೊಕ್ಮೆಯಾಮ್ ಮತ್ತು ಅದರ ಗೋಮಾಳಗಳು, ಬೇತ್ ಹೋರೋನ್ ಮತ್ತು ಅದರ ಉಪನಗರಗಳು, 69 ಅಯ್ಯಾಲೋನ್, ಗತ್ರಿಮ್ಮೋನ್, ಎಂಬ ಗೋಮಾಳ ಸಹಿತವಾದ ಪಟ್ಟಣಗಳು ಚೀಟಿಹಾಕುವುದರ ಮೂಲಕ ದೊರಕಿದವು. 70 ಮನಸ್ಸೆ ಕುಲದ ಸ್ವತ್ತಿನ ಆನೇರ್, ಬಿಳ್ಳಾಮ್ ಎಂಬ ಹುಲ್ಲುಗಾವಲು ಸಹಿತವಾದ ಪಟ್ಟಣಗಳು ಕೆಹಾತ್ಯರ ಉಳಿದ ಕುಟುಂಬಗಳ ಪಾಲಿಗೆ ಬಂದವು.
71 ಗೇರ್ಷೊಮ್ಯರಿಗೆ ಮನಸ್ಸೆ ಕುಲದ ಸ್ವತ್ತಿನಿಂದ ಬಾಷಾನಿನ ಗೋಲಾನ್, ಅಷ್ಟಾರೋಟ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. 72 ಇಸ್ಸಾಕಾರ್ಯರ ಸ್ವತ್ತಿನಿಂದ ಕೆದೆಷ್, ದಾಬೆರತ್, 73 ರಾಮೋತ್, ಅನೇಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. 74 ಅಶೇರನ ಕುಲದ ಸ್ವತ್ತಿನಿಂದ ಮಾಷಾಲ್, ಅಬ್ದೋನ್. 75 ಹೂಕೋಕ್, ರೆಹೋಬ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. 76 ನಫ್ತಾಲಿ ಕುಲದ ಸ್ವತ್ತಿನಿಂದ ಗಲಿಲಾಯದ ಕೆದೆಷ್, ಹಮ್ಮೋನ್, ಕಿರ್ಯಾತಯಿಮ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು ದೊರಕಿದವು. 77 ಮಿಕ್ಕ ಲೇವಿಯರಾದ ಮೆರಾರಿಯರಿಗೆ ಜೆಬುಲೋನ್ ಕುಲದ ಸ್ವತ್ತಿನಿಂದ ರಿಮ್ಮೋನೋ, ತಾಬೋರ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳೂ, 78 ಯೆರಿಕೋವಿನ ಬಳಿಯಲ್ಲಿ ಹರಿಯುವ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿರುವ ಅರಣ್ಯದ ಬೆಚೆರ್ ಮತ್ತು ಅದರ ಗೋಮಾಳಗಳು, ಯಹಚ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು. 79 ಕೆದೇಮೋತ್ ಮತ್ತು ಅದರ ಗೋಮಾಳಗಳು, ಮೇಫಾತ್ ಮತ್ತು ಅದರ ಗೋಮಾಳಗಳು ರೂಬೇನ್ ಕುಲದಿಂದ ದೊರಕಿದವು.
80 ಗಾದ್ ಕುಲದ ಸ್ವತ್ತಿನಿಂದ ಗಿಲ್ಯಾದಿನ ರಾಮೋತ್ ಮತ್ತು ಅದರ ಗೋಮಾಳಗಳು ಮಹನಯಿಮ್, 81 ಹೆಷ್ಬೋನ್ ಮತ್ತು ಅದರ ಗೋಮಾಳಗಳು, ಯಗ್ಜೇರ್ ಮತ್ತು ಅದರ ಗೋಮಾಳಗಳು ಸಹಿತವಾದ ಪಟ್ಟಣಗಳು ದೊರಕಿದವು.
<- 1 ಪೂರ್ವಕಾಲವೃತ್ತಾಂತ 51 ಪೂರ್ವಕಾಲವೃತ್ತಾಂತ 7 ->- a ಯೋವೇಲ್ ಅಥವಾ ವಷ್ಣಿ.