20 [r]ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ [s]ಪ್ರಥಮಫಲವಾದನು. 21 [t] ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ. 22 ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು. 23 ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು. 24 ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. 25 ಯಾಕೆಂದರೆ [u]ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ. 26 [v]ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ. 27 “ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನಮಾಡಿದ್ದಾನೆ.” ಆದರೆ “ಸಮಸ್ತವೂ ಆತನಿಗೆ ಅಧೀನಮಾಡಲ್ಪಟ್ಟಿದೆ” ಎಂದು ಹೇಳುವಾಗ ಸಮಸ್ತವನ್ನು ಅಧೀನಮಾಡಿಕೊಟ್ಟಾತನು ಅದರಲ್ಲಿ ಸೇರಲಿಲ್ಲವೆಂಬುದು ಸ್ಪಷ್ಟವಾಗಿದೆ. 28 ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಮಸ್ತವನ್ನೂ ತನಗೆ ಅಧೀನಮಾಡಿ ಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ [w]ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗುವನು.
29 ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ. 30 [x]ನಾವು ಸಹ ಯಾಕೆ ಪ್ರತಿ ಗಳಿಗೆಯಲ್ಲಿಯೂ ಭಯದಲ್ಲಿದ್ದೇವೆ? 31 ಪ್ರಿಯರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ [y]ನಿಮ್ಮನ್ನು ಕುರಿತಾಗಿ ನನಗಿರುವ ಹೆಮ್ಮೆಯ ನಿಮಿತ್ತ [z]ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ. 32 ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು [aa]ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ. 33 ಮೋಸಹೋಗಬೇಡಿರಿ; [bb]“ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.” 34 ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; [cc]ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.
42 ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು. 43 ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, [ee]ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು; 44 ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ. 45 [ff]“ಮೊದಲನೆಯ ಮನುಷ್ಯನಾದ ಆದಾಮನು ಜೀವ ಪಡೆದ ವ್ಯಕ್ತಿ” ಎಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದದೆಯಲ್ಲಾ. [gg] ಕಡೆ ಆದಾಮನಾದರೋ [hh]ಜೀವ ಕೊಡುವ ಆತ್ಮನಾದನು. 46 ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು. 47 ಮೊದಲನೆಯ ಮನುಷ್ಯನು [ii]ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು. 48 ಮಣ್ಣಿನಿಂದ ಹುಟ್ಟಿದವನು ಎಂಥವನೋ ಮಣ್ಣಿಗೆ ಸಂಬಂಧಪಟ್ಟವರೂ ಅಂಥವರೇ ಆಗಿರುತ್ತಾರೆ; ಪರಲೋಕದಿಂದ ಬಂದಾತನು ಎಂಥವನೋ [jj]ಪರಲೋಕಕ್ಕೆ ಸಂಬಂಧಪಟ್ಟವರೂ ಅಂಥವರೇ. 49 ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ [kk]ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.
50 ಸಹೋದರರೇ, ನಾನು ಹೇಳುವುದೇನಂದರೆ, [ll]ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. 51 ನೋಡಿರಿ! ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಾನು ನಿಮಗೆ ತಿಳಿಸುತ್ತೇನೆ, [mm]ನಾವೆಲ್ಲರೂ ಸಾಯುವುದಿಲ್ಲ, ಮಾರ್ಪಡುವೆವು. 52 ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ [nn]ಮಾರ್ಪಡುವೆವು. ಹೌದು, [oo]ತುತ್ತೂರಿಯು ಮೊಳಗಿ [pp]ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು. 53 ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, [qq]ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ. 54 ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. 55 [rr]“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” 56 ಸಾವಿನ ವಿಷಕೊಂಡಿ ಪಾಪವೇ; ಪಾಪದ ಶಕ್ತಿಯ ಆಧಾರವು ಧರ್ಮಶಾಸ್ತ್ರವಿಧಿಗಳೇ. 57 [ss]ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ. 58 ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ [tt]ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
<- 1 ಕೊರಿಂಥದವರಿಗೆ 141 ಕೊರಿಂಥದವರಿಗೆ 16 ->- a ರೋಮಾ. 5:2
- b 1 ಕೊರಿ 1:18
- c 1 ಕೊರಿ 11:23; ಗಲಾ. 1:12
- d ಯೆಶಾ 53:8,9; ಜೆಕ. 13:7
- e ಲೂಕ 24:34
- f ಮಾರ್ಕ 16:14; ಲೂಕ 24:36; ಯೋಹಾ 20:19,26
- g ಮತ್ತಾ 28:17
- h ಸತ್ತು ಹೋಗಿದ್ದಾರೆ
- i ಲೂಕ 24:50; ಅ. ಕೃ. 1:3-4
- j 1 ಕೊರಿ 9:1
- k ಎಫೆ 3:7,8; 2 ಕೊರಿ 12:11; 1 ತಿಮೊ. 1:13-16
- l ಅ. ಕೃ. 8:3
- m 1 ಕೊರಿ 11:23; 12:11; ಕೊಲೊ 1:29
- n 1 ಕೊರಿ 3:6; 2 ಕೊರಿ 3:5
- o ಅ. ಕೃ. 23:8; 2 ತಿಮೊ. 2:18
- p ಅ. ಕೃ. 2:24
- q ರೋಮಾ. 4:25
- r 2 ತಿಮೊ. 2:8; 1 ಪೇತ್ರ 1:3
- s ವ. 23; ಅ. ಕೃ. 26:23
- t ರೋಮಾ. 5:12
- u ಕೀರ್ತ 110:1; 8:6
- v 2 ತಿಮೊ. 1:10
- w 1 ಕೊರಿ 3:23; 11:3
- x 2 ಕೊರಿ 11:26
- y 1 ಥೆಸ. 2:19
- z ಲೂಕ 9:23; ರೋಮಾ. 8:36
- aa ಯೆಶಾ 22:13
- bb 1 ಕೊರಿ 5:6
- cc 1 ಕೊರಿ 6:5
- dd ಯೋಹಾ 12:24
- ee ಫಿಲಿ. 3:21; ಕೊಲೊ 3:4
- ff ಆದಿ 2:7
- gg ರೋಮಾ. 5:14
- hh
- ii ಆದಿ 2:7; 3:19
- jj ಫಿಲಿ. 3:20
- kk ರೋಮಾ. 8:29
- ll ಯೋಹಾ 3:3-5
- mm 1 ಥೆಸ. 4:15-17
- nn ಫಿಲಿ. 3:21
- oo ಮತ್ತಾ 24:31; 1 ಥೆಸ. 4:16
- pp ಯೋಹಾ 5:25, 28
- qq 2 ಕೊರಿ 5:2-4
- rr ಹೋಶೇ. 13:14
- ss ರೋಮಾ. 8:37; 1 ಯೋಹಾ 5:4
- tt ಗಲಾ. 6:9; 1 ಕೊರಿ 3:8