4 ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಜನರು ಇದ್ದರು. 5 ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು. 6 ಆದರೆ ಅವನು †ನ್ಯಾಯ 1:16.ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು. 7 ಆಗ ಸೌಲನು ಅಮಾಲೇಕ್ಯರನ್ನು ‡ಆದಿ 2:11.ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ §ವಿಮೋ 15:22.ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು. 8 ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು. 9 ಸೌಲನೂ ಮತ್ತು ಇಸ್ರಾಯೇಲರೂ ಅಗಾಗನನ್ನೂ, ಉತ್ತಮವಾದ ಕುರಿದನಗಳನ್ನೂ, ಕುರಿಮರಿಗಳನ್ನೂ, ಕೊಬ್ಬಿದ ಪಶುಗಳನ್ನೂ, ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.
12 ಸಮುವೇಲನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವುದಕ್ಕೆ ಹೊರಟಾಗ ಅವನಿಗೆ, “ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನು” ಎಂಬ ವರ್ತಮಾನವು ಬಂದದ್ದರಿಂದ 13 ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “*ರೂತ. 2:20.ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು. 14 ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ” ಎನ್ನಲು 15 ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು. 16 ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು. 17 ಸಮುವೇಲನು, “ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸನ್ನಾಗಿ ಮಾಡಿದನು. 18 ಆತನು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದನು. 19 ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು. 20 ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು. 21 ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಸಮರ್ಪಣೆಮಾಡುವುದಕ್ಕಾಗಿ ಉಳಿಸಿ ತಂದರು” ಎಂದು ಉತ್ತರಕೊಟ್ಟನು. 22 ಅದಕ್ಕೆ ಸಮುವೇಲನು,
24 ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು. 25 ನೀನು ದಯವಿಟ್ಟು ನನ್ನ ಪಾಪವನ್ನು ಕ್ಷಮಿಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಅವನನ್ನು ಬೇಡಿಕೊಂಡನು. 26 ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಯೆಹೋವನ ಮಾತನ್ನು ಅನುಸರಿಸಿ ನಡೆಯದೆ ಇದ್ದುದರಿಂದ ಆತನು ನಿನ್ನನ್ನು ಇಸ್ರಾಯೇಲರ ಅರಸುತನದಿಂದ ನಿವಾರಿಸಿದ್ದಾನೆ” ಎಂದು ಹೇಳಿ ತಿರುಗಿಕೊಂಡು ಹೊರಡಲು 27 ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು. 28 ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ. 29 *ಅರಣ್ಯ 23:19.ಇಸ್ರಾಯೇಲರ ನಿರಂತರ ಆಧಾರವಾಗಿ ಇರುವವನು ಸುಳ್ಳಾಡುವವನಲ್ಲ; ಪಶ್ಚಾತ್ತಾಪಪಡುವವನಲ್ಲ; ಏಕೆಂದರೆ ವಾಗ್ದಾನ ಮಾಡಿದ ಮಾತನ್ನು ನಡೆಸದೆ ಬಿಡುವವನಲ್ಲ” ಎಂದು ಹೇಳಿದನು. 30 ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು. 31 ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು. ಆಗ ಸೌಲನು ದೇವರನ್ನು ಆರಾಧಿಸಿದನು.
34 ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು. 35 ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.
<- 1 ಸಮುವೇಲನು 141 ಸಮುವೇಲನು 16 ->