11 ಸೊಲೊಮೋನನು, “ಯಾವ ಯಾವ ಸ್ಥಳಗಳಲ್ಲಿ ಯೆಹೋವನ ಮಂಜೂಷವಿತ್ತೋ ಅವೆಲ್ಲವೂ ಪವಿತ್ರಸ್ಥಾನಗಳು. ಆದುದರಿಂದ ಇಸ್ರಾಯೇಲರ ಅರಸನಾದ ದಾವೀದನ ಮನೆಯಲ್ಲಿ ಫರೋಹನ ಪುತ್ರಿಯಾದ ನನ್ನ ಹೆಂಡತಿಯು ವಾಸಿಸಬಾರದು” ಅಂದುಕೊಂಡು ಆಕೆಯನ್ನು ದಾವೀದನಗರದಲ್ಲಿರಿಸದೆ, ತಾನು ಆಕೆಗಾಗಿ ಕಟ್ಟಿಸಿದ ಮಂದಿರಕ್ಕೆ ಕರೆದುಕೊಂಡು ಬಂದನು.
12 ಆ ಕಾಲದಿಂದ ಸೊಲೊಮೋನನು, ತಾನು ಮಂಟಪದ ಮುಂದೆ ಕಟ್ಟಿಸಿದ ಯೆಹೋವನ ಯಜ್ಞವೇದಿಯ ಮೇಲೆ, 13 ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು. 14 ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು. 15 ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ. 16 ಈ ಪ್ರಕಾರ ಆಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸ ಕಾರ್ಯಗಳೂ ಮುಗಿದು ಯೆಹೋವನ ಆಲಯವು ಪೂರ್ಣಗೊಂಡಿತ್ತು.
17 ಆನಂತರ, ಸೊಲೊಮೋನನು ಎದೋಮ್ ದೇಶದ ಸಮುದ್ರ ತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು. 18 ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡುಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನು ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ನಾನೂರೈವತ್ತು ತಲಾಂತು ಬಂಗಾರವನ್ನು ತಂದುಕೊಟ್ಟರು.
<- 2 ಪೂರ್ವಕಾಲವೃತ್ತಾಂತ 72 ಪೂರ್ವಕಾಲವೃತ್ತಾಂತ 9 ->