13 *2 ಕೊರಿ 9:12; ಅ. ಕೃ. 20:33ನನ್ನನ್ನು ಸಂರಕ್ಷಿಸುವ ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬುವ ಒಂದೇ ವಿಷಯದಲ್ಲಿ ಹೊರತು ಇನ್ಯಾವ ವಿಷಯದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆಮಾಡಿಲ್ಲವಲ್ಲಾ? ನನ್ನ ಈ ತಪ್ಪನ್ನು ಕ್ಷಮಿಸಿರಿ. 14 ಇಗೋ ನಾನು ನಿಮ್ಮ ಬಳಿಗೆ †2 ಕೊರಿ 13:1ಮೂರನೇ ಸಾರಿ ಬರುವುದಕ್ಕೆ ಸಿದ್ಧವಾಗಿದ್ದೇನೆ ಮತ್ತು ನಿಮಗೆ ಭಾರವಾಗಿರುವುದಿಲ್ಲ. ನಾನು ನಿಮ್ಮ ಸೊತ್ತನ್ನು ಬಯಸದೇ ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ಕೂಡಿಸಿಡುವುದು ಧರ್ಮವಲ್ಲ. ಆದರೆ ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುವುದೇ ಧರ್ಮ. 15 ‡2 ಕೊರಿ 1:6; ಫಿಲಿ. 2:17; ಕೊಲೊ 1:24; 1 ಥೆಸ. 2:8; 2 ತಿಮೊ. 2:10ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ? 16 ಆದರೆ ಹೀಗಿರಲು, §2 ಕೊರಿ 11:9ನಾನು ನಿಮಗೆ ಭಾರವಾಗಲಿಲ್ಲ, ಆದರೆ ಉಪಾಯದಿಂದ ನಿಮ್ಮನ್ನು ಸಂಚುಹೂಡಿ ಹಿಡಿದೆನು ಎಂದು ಹೇಳಿರಿ. 17 ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾದರೂ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ? 18 ನಿಮ್ಮ ಬಳಿಗೆ ಹೋಗುವುದಕ್ಕೆ ನಾನು *2 ಕೊರಿ 8:6ತೀತನನ್ನು ಬೇಡಿಕೊಂಡು †2 ಕೊರಿ 8:18ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿ ಕೊಟ್ಟೆನು, ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಹಾದಿಯಲ್ಲಿ ನಡೆಯಲಿಲ್ಲವೋ? ನಾವು ಅದೇ ಕ್ರಮದಲ್ಲಿ ಹೆಜ್ಜೆ ಇಡಲಿಲ್ಲವೋ? 19 ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿರುವವರೆಂದು ಭಾವಿಸುತ್ತೀರೋ? ‡ರೋಮಾ. 1:9; 9:1ದೇವರ ಸನ್ನಿಧಾನದಲ್ಲಿಯೇ, ನಾವು ಕ್ರಿಸ್ತನಲ್ಲಿದ್ದು ನಿಮ್ಮ ಭಕ್ತಿವೃದ್ಧಿಗೋಸ್ಕರವೇ ಮಾತನಾಡುವವರಾಗಿದ್ದೇವೆ. 20 §2 ಕೊರಿ 2:1-4; 1 ಕೊರಿ 4:21ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು. 21 ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ *1 ಕೊರಿ 5:1; 1 ಕೊರಿ 6:18ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.
<- 2 ಕೊರಿಂಥದವರಿಗೆ 112 ಕೊರಿಂಥದವರಿಗೆ 13 ->- a ಗಲಾ. 1:12; 2:2; ಎಫೆ 3:3
- b 2 ಕೊರಿ 5:17
- c 2 ಕೊರಿ 11:11
§12:3-4 ಲೂಕ 23:43; ಪ್ರಕ 2:7
- e 1 ಕೊರಿ 2:3; 2 ಕೊರಿ 11:30
- f 2 ಕೊರಿ 5:13; 11:16,17
- g ಮತ್ತಾ 26:44
- h ಯೆಶಾ 43:2; ಫಿಲಿ. 4:13
- i ಯೆಶಾ 40:29-31
- j 2 ಕೊರಿ 5:15
- k ರೋಮಾ. 5:3
- l ವ. 6 ನೋಡಿರಿ
- m 1 ಕೊರಿ 3:7; 15:9
- n 2 ಕೊರಿ 9:12; ಅ. ಕೃ. 20:33
- o 2 ಕೊರಿ 6:4,5
- p ಅ. ಕೃ. 19:11,12; ರೋಮಾ. 15:19; 1 ಕೊರಿ 9:1
- q 2 ಕೊರಿ 9:12; ಅ. ಕೃ. 20:33
- r 2 ಕೊರಿ 13:1
- s 2 ಕೊರಿ 1:6; ಫಿಲಿ. 2:17; ಕೊಲೊ 1:24; 1 ಥೆಸ. 2:8; 2 ತಿಮೊ. 2:10
- t 2 ಕೊರಿ 11:9
- u 2 ಕೊರಿ 8:6
- v 2 ಕೊರಿ 8:18
- w ರೋಮಾ. 1:9; 9:1
- x 2 ಕೊರಿ 2:1-4; 1 ಕೊರಿ 4:21
- ~25~ 1 ಕೊರಿ 5:1; 1 ಕೊರಿ 6:18