5 ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. *ರೋಮಾ. 8:10; ಗಲಾ. 4:19ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ. 6 ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು. 7 ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಆ ಪರೀಕ್ಷೆಗೆ ಒಳ್ಳಗಾದವರೆಂದು ತೋರಿ ಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಆ ಪರೀಕ್ಷೆಗೆ ಒಳ್ಳಗಾದವರೆನಿಸಿಕೊಂಡರೂ ನೀವು ಒಳ್ಳೆಯದನ್ನು ಮಾಡುವವರಾಗಬೇಕೆಂಬುದೇ ನಮ್ಮ ಉದ್ದೇಶ. 8 ಸತ್ಯಕ್ಕೆ ವಿರೋಧವಾಗಿ ನಾವೇನೂ ಮಾಡಲಾರೆವು, ಸತ್ಯಾಭಿವೃದ್ದಿಗೋಸ್ಕರವೇ ಸಮಸ್ತವನ್ನು ಮಾಡುತ್ತೇವೆ. 9 †1 ಕೊರಿ 4:10; 2 ಕೊರಿ 4:12; 12:5; 9:10ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ; ಇದಲ್ಲದೆ ನೀವು ಪೂರ್ಣ ಕ್ರಮಕ್ಕೆ ಬರಬೇಕೆಂದು ಪ್ರಾರ್ಥಿಸುತ್ತೇವೆ.
10 ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗಲೇ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಬದಲಾಗಿ ಕಟ್ಟುವುದಕ್ಕಾಗಿಯೇ ಬರೆದಿದ್ದೇನೆ. ‡2 ಕೊರಿ 10:8ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ §2 ಕೊರಿ 2:3ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಇದನ್ನು ಬರೆಯುತ್ತಿದ್ದೇನೆ.
- a ಧರ್ಮೋ 19:15; ಅರಣ್ಯ 35:30
- b 2 ಕೊರಿ 13:10; 1 ಕೊರಿ 4:21
- c 2 ಕೊರಿ 12:21
- d 2 ಕೊರಿ 10:4
- e ಫಿಲಿ. 2:7,8; 1 ಪೇತ್ರ 3:18
- f ರೋಮಾ. 1:4; 6:4
- g 2 ಕೊರಿ 12:10
- h ರೋಮಾ. 6:8
- i ರೋಮಾ. 8:10; ಗಲಾ. 4:19
- j 1 ಕೊರಿ 4:10; 2 ಕೊರಿ 4:12; 12:5; 9:10
- k 2 ಕೊರಿ 10:8
- l 2 ಕೊರಿ 2:3
- m ನಿಮಗೆ ಕ್ಷೇಮವಾಗಲಿ
- n ರೋಮಾ. 12:16
- o ಮಾರ್ಕ 9:50
- p ರೋಮಾ. 15:33
- q ರೋಮಾ. 16:16
- r ಫಿಲಿ. 4:22
- s ರೋಮಾ. 16:20; 1 ಕೊರಿ 16:23
- t ಯೂದ. 21
- u ಫಿಲಿ. 2:1