7 [o]ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ [p]ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. 8 [q]ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. 9 ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. 10 [r]ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ [s]ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. 11 ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. 12 ಹೀಗೆ ನಮ್ಮಲ್ಲಿ ಮರಣವು ನಿಮ್ಮಲ್ಲಿ ಜೀವವು ವ್ಯಾಪಿಸುತ್ತಿದೆ.
13 “ನಾನು [t]ನಂಬಿದೆನು. ಆದ್ದರಿಂದ ಮಾತನಾಡಿದೆನು.” ಎಂಬ ಶಾಸ್ತ್ರೋಕ್ತಿಯಲ್ಲಿ ಕಾಣುವಹಾಗೆ ನಂಬಿಕೆಯ ಅದೇ ಆತ್ಮನು ನಮ್ಮಲ್ಲಿರುವುದರಿಂದ ನಾವು ನಂಬಿದವರಾಗಿ ಮಾತನಾಡುತ್ತೇವೆ. 14 [u]ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನೊಂದಿಗೆ ಎಬ್ಬಿಸಿ ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ. 15 ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. [v]ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹು ಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವುದರಿಂದ ದೇವರ ಮಹಿಮೆಗೆ ಅಧಿಕವಾದ ಸ್ತುತಿ ಸ್ತೋತ್ರಗಳು ಉಂಟಾಗುವುದು.
- a 2 ಕೊರಿ 3:6
- b ರೋಮಾ. 6:21
- c 2 ಕೊರಿ 2:17
- d 2 ಕೊರಿ 5:11-12
- e 2 ಕೊರಿ 3:14
- f 1 ಕೊರಿ 1:18, 2 ಕೊರಿ 2:15
- g ಮತ್ತಾ 13:15
- h ಕೊಲೊ 1:15, ಫಿಲಿ. 2:, ಯೋಹಾ 14:9
- i ಅ. ಕೃ. 26:18
- j ಯೋಹಾ 12:31
- k 1 ಕೊರಿ 9:19, 2 ಕೊರಿ 1:24
- l ಆದಿ 1:3
- m ವ 4 ನೋಡಿರಿ
- n 2 ಪೇತ್ರ. 1:19
- o 2 ತಿಮೊ. 2:20, 2 ಕೊರಿ 5:1
- p 1 ಕೊರಿ 2:5
- q 2 ಕೊರಿ 7:5
- r 2 ತಿಮೊ. 2:11
- s 2 ಕೊರಿ 6:9, 1 ಕೊರಿ 4:9; 15:31
- t ಕೀರ್ತ 116:10
- u 1 ಥೆಸ. 4:14, 1 ಕೊರಿ 1:9, ಅ. ಕೃ. 2:24
- v 2 ಕೊರಿ 1:19, 9:11-12
- w ರೋಮಾ. 12:2, ಯೆಶಾ 40:30-31
- x 2 ಕೊರಿ 5:7, ರೋಮಾ. 8:24