1 [a]ಭೂಮಿಯ ಮೇಲಿರುವ [b]ನಮ್ಮ ಈ ದೇಹವೆಂಬ ಗುಡಾರವು ಅಳಿದುಹೊದರೂ, ದೇವರಿಂದ ನಿರ್ಮಿತವಾಗಿರುವ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು; [c]ಅದು ಮನುಷ್ಯನ ಕೈಗಳಿಂದ ಕಟ್ಟಿರುವ ಮನೆಯಲ್ಲ ಬದಲಾಗಿ ಶಾಶ್ವತವಾದ ಮನೆಯಾಗಿದೆ. 2 ನಾವು ಈ ದೇಹದಲ್ಲಿರುವವರೆಗೆ ನರಳುತ್ತಾ; [d]ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ದೇಹದ ಮೇಲೆ ನಾವು ಎಂದು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ. 3 ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು. 4 ಏಕೆಂದರೆ, ಈ ದೇಹವೆಂಬ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ; ಬದಲಾಗಿ ಅದರ ಮೇಲೆ ಧರಿಸಿಕೊಳ್ಳಬೇಕೆಂಬುದೇ. ಆದ್ದರಿಂದ [e]ನಶ್ವರವಾದದ್ದು ಅಳಿದುಹೋಗಿ ಅಮರವಾದದ್ದು ಉಳಿಯುವಂತೆ ಅಪೇಕ್ಷಿಸುತ್ತೇವೆ. 5 ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ [f]ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ. 6 ಹೀಗಿರುವುದರಿಂದ ನಾವು ಯಾವಾಗಲೂ ನಂಬಿಕೆಯುಳ್ಳವರಾಗಿರಬೇಕು; [g]ದೇಹದಲ್ಲಿ ವಾಸಿಸುವವರೆಗೂ ಕರ್ತನಿಂದ ದೂರದಲ್ಲಿರುವ ಪ್ರವಾಸಿಗಳಾಗಿದ್ದೇವೆ 7 [h]ನಾವು ನೋಡುತ್ತಾ ನಡೆಯದೇ, [i]ನಂಬುವವರಾಗಿಯೇ ನಡೆಯುತ್ತೇವೆ. 8 ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು [j]ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ. 9 ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ. 10 [k]ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ [l]ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
20 [x]ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ. 21 ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
<- 2 ಕೊರಿಂಥದವರಿಗೆ 42 ಕೊರಿಂಥದವರಿಗೆ 6 ->- a 2 ಕೊರಿ 4:7
- b 2 ಪೇತ್ರ 1:13-14
- c ಮಾರ್ಕ 14:58
- d 1 ಕೊರಿ 15:53-54
- e 1 ಕೊರಿ 15:54
- f ರೋಮಾ. 8:23; 2 ಕೊರಿ 1:22
- g ಇಬ್ರಿ. 11:13,14
- h 1 ಕೊರಿ 13:12
- i ಯೋಹಾ 20:29; 2 ಕೊರಿ 4:18
- j ಫಿಲಿ. 1:23
- k ತೀತ. 62:12
- l ಮತ್ತಾ 25:31-32; ರೋಮಾ. 14:10; ಅ. ಕೃ. 10:42
- m 2 ಕೊರಿ 4:2
- n 2 ಕೊರಿ 3:1
- o 2 ಕೊರಿ 11:1,16,7; 12:6,11; ಅ. ಕೃ. 26:24,25
- p ರೋಮಾ. 5:15
- q ರೋಮಾ. 6:11,12; 14:7
- r ಗಲಾ. 2:6; ಫಿಲಿ. 3:7,8; ಕೊಲೊ 2:11
- s 2 ಕೊರಿ 12:2; ಗಲಾ. 1:22
- t ಯೋಹಾ 3:3; ರೋಮಾ. 6:4; ಗಲಾ. 6:15
- u ಯೆಶಾ 43:18,19; ಪ್ರಕ 21:5; ಎಫೆ 2:15; 4:24
- v ಕೊಲೊ 1:20; ರೋಮಾ. 5:10
- w ಕೀರ್ತ 32:2; ರೋಮಾ. 4:8; 1 ಕೊರಿ 13:5
- x ಎಫೆ 6:20