7 ಆಗ ನಾತಾನನು ದಾವೀದನನ್ನು ನೋಡಿ, “ಆ ಮನುಷ್ಯನು ನೀನೇ. ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೇಳುವುದೇನೆಂದರೆ, ‘ನಿನ್ನನ್ನು ಅಭಿಷೇಕಿಸಿ ಇಸ್ರಾಯೇಲ್ಯರಿಗೆ ಅರಸನನ್ನಾಗಿ ಮಾಡಿದವನು, ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನು ನಾನೇ. 8 ಇದಲ್ಲದೆ ನಾನು ನಿನಗೆ ನಿನ್ನ ಯಜಮಾನನ ಮನೆಯನ್ನು ಒಪ್ಪಿಸಿದೆನು. ಅವನ ಹೆಂಡತಿಯರನ್ನು ನಿನ್ನ ಮಗ್ಗುಲಿಗೆ ಕೊಟ್ಟೆನು. ಇಸ್ರಾಯೇಲ್ ಹಾಗೂ ಯೆಹೂದ ಕುಲಗಳನ್ನು ನಿನಗೆ ವಶಪಡಿಸಿದೆನು. ಇದೂ ಸಾಕಾಗಾದೆ ಹೋಗಿದ್ದರೆ ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆನು. 9 ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ, ನನ್ನ ದೃಷ್ಟಿಯಲ್ಲಿ ಅನೀತಿಯನ್ನು ಕೆಟ್ಟದ್ದಾಗಿರುವುದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿರುವೆ. 10 ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದ್ದರಿಂದಲೂ, ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದ್ದರಿಂದಲೂ, ನೀತಿಯ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವುದಿಲ್ಲ. 11 ಯೆಹೋವನಾದ ನನ್ನ ಮಾತನ್ನು ಕೇಳು. ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿರುವೆ. 12 ನಾನು ಹೇಳುವ ಮಾತಾದರೋ ಎಲ್ಲಾ ಇಸ್ರಾಯೇಲ್ಯರ ಮುಂದೆ ಹಗಲಿನಲ್ಲೇ ನೆರವೇರುವುದು’ ” ಎಂದನು.
16 ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು. 17 ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ. 18 ಏಳನೆಯ ದಿನ ಮಗು ಸತ್ತುಹೋಯಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವನು ನಮ್ಮ ಸಂತೈಸುವಿಕೆಯನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣದ ವಾರ್ತೆಯನ್ನು ಅವನಿಗೆ ತಿಳಿಸಿದರೆ ಅವನು ತನಗೆ ಏನಾದರೂ ಕೇಡುಮಾಡಿಕೊಂಡಾನಲ್ಲವೇ” ಎಂದು ಮಾತನಾಡಿಕೊಳ್ಳುತ್ತಿದ್ದರು. 19 ಸೇವಕರು ಈ ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು 20 ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು. 21 ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು. 22 ದಾವೀದನು ಅವರಿಗೆ, “ಹುಡುಗನು ಜೀವದಿಂದಿದ್ದಾಗ ಒಂದು ವೇಳೆ ಯೆಹೋವನು ಕೃಪೆಮಾಡಿ ಅವನನ್ನು ಉಳಿಸಾನು ಅಂದುಕೊಂಡು ಉಪವಾಸ ಮಾಡಿದೆನು, ಅತ್ತೆನು. 23 ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.
29 ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು. 30 ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ[b] ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು. 31 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಮಾಡುವುದಕ್ಕೂ ಇಟ್ಟಿಗೆಗಳನ್ನು ಮಾಡುವುದಕ್ಕೂ ಹಚ್ಚಿದರು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ಹೋದನು.
<- 2 ಸಮುವೇಲನು 112 ಸಮುವೇಲನು 13 ->