4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು. 5 ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು. 6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು. 7 ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು. 8 ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. 9 ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ, 10 ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ? 11 ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು. 12 ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
23 “ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ. 24 ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು. 25 ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
26 “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ. 27 ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು. 28 ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು. 29 ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
30 “ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು. 31 ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
32 “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ; 33 ‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
34 “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ. 35 ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
36 “ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು. 37 ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.
38 “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ. 39 ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ. 40 ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
42 ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು. 43 ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
44 ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು. 45 ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು. 46 ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. 47 ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ;
48 ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. 49 ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು. 50 ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು. 51 ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು. 52 ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.
<- ಅಪೊಸ್ತಲರ ಕೃತ್ಯಗಳು 12ಅಪೊಸ್ತಲರ ಕೃತ್ಯಗಳು 14 ->