Link to home pageLanguagesLink to all Bible versions on this site

1 ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ, 2 ಅವರ ಹೃದಯಗಳು ಉತ್ತೇಜನಗೊಂಡು, [a]ಪ್ರೀತಿಯಿಂದ ಒಂದಾಗಿದ್ದು, ದೇವರ ಮರ್ಮವನ್ನು ಅಂದರೆ ಕ್ರಿಸ್ತನನ್ನು ತಿಳಿದುಕೊಳ್ಳುವ ಮೂಲಕ ಬರುವ ನಿಶ್ಚಯವಾದ ಭಾಗ್ಯವನ್ನು ಪಡೆಯಬೇಕೆಂಬುದೇ ನನ್ನ ಅಪೇಕ್ಷೆ. ಅದಕ್ಕಾಗಿಯೇ ನಾನು [b]ಎಷ್ಟು ಪ್ರಯಾಸಪಡುತ್ತಿದ್ದೇನೆಂಬುದು ನಿಮಗೆ ತಿಳಿದಿರಬೇಕೆಂದು ಬಯಸುತ್ತೇನೆ. 3 [c]ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ. 4 ಯಾರೂ ನಿಮ್ಮನ್ನು ತಮ್ಮ ಮನವೊಲಿಸುವ ಮಾತುಗಳಿಂದ ಮೋಸಗೊಳಿಸದಿರಲಿ ಎಂದು ನಾನು ನಿಮಗೆ ಇದನ್ನು ಹೇಳುತ್ತಿದ್ದೇನೆ. 5 [d]ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು [e]ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು [f]ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.

ಕ್ರಿಸ್ತನು ನಿಜವಾದ ಜೀವವನ್ನು ಕೊಡುವಾತನು
6 [g]ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ. 7 [h]ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು [i]ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.

8 [j]ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು [k]ಮನುಷ್ಯರ ಸಂಪ್ರದಾಯಗಳಿಗೆ ಮತ್ತು [l]ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ. 9 ದೇವರ ಸರ್ವಸಂಪೂರ್ಣತೆಯು [m]ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ, 10 [n]ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ [o]ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ. 11 ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ [p]ಪಾಪಸ್ವಭಾವವನ್ನು ತೆಗೆದುಹಾಕುವುದೇ. 12 [q]ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು [r]ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ. 13 ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ [s]ಸತ್ತವರಾಗಿದ್ದ ನಿಮ್ಮನ್ನು [t]ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ. 14 [u]ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು. 15 ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ [v]ನಿರಾಯುಧರನ್ನಾಗಿ ಮಾಡಿ, ತನ್ನ [w]ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.

16 ಹೀಗಿರುವುದರಿಂದ, [x]ಅನ್ನಪಾನಗಳ ವಿಷಯದಲ್ಲಿಯೂ ಅಥವಾ [y]ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ [z]ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ. 17 [aa]ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ. 18 [bb]ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, [cc]ದರ್ಶನಗಳಾದವೆಂದು ಕೊಚ್ಚಿಕೊಂಡು, [dd]ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ [ee]ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ. 19 ಇಂಥವನು [ff]ಕ್ರಿಸ್ತನೆಂಬ ತಲೆಯೊಂದಿಗೆ ಸಂಬಂಧ ಕಳೆದುಕೊಂಡವನಾಗಿದ್ದಾನೆ, ತಲೆಯಿಂದಲೇ ದೇಹವೆಲ್ಲಾ ಕೀಲುನರಗಳ ಮೂಲಕ ಬೇಕಾದ ಪೋಷಣೆಯನ್ನು ಹೊಂದಿ, ಒಂದಾಗಿ ಜೋಡಿಸಲ್ಪಟ್ಟ ದೇಹವಾಗಿ, ದೇವರು ಕೊಡುವ ಅಭಿವೃದ್ಧಿಯಿಂದ ಬೆಳೆಯುತ್ತಾ ಬರುತ್ತದೆ.

20 ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು [gg]ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, [hh]ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ, 21-22 [ii]“ಇದನ್ನು ಹಿಡಿಯಬೇಡ, ಇದರ ರುಚಿನೋಡಬೇಡ, ಅದನ್ನು ಮುಟ್ಟಬೇಡ” ಎನ್ನುವ [jj]ನಿಬಂಧನೆಗಳಿಗೆ ಅಧೀನರಾಗಿರುವುದೇತಕ್ಕೆ? ಈ ಮಾನವ ಆಜ್ಞೆಗಳೂ ಹಾಗೂ ಬೋಧನೆಗಳೂ ಉಪಯೋಗದಿಂದ ನಾಶವಾಗುವ [kk]ಪದಾರ್ಥಗಳಿಗೆ ಅನುಸಾರವಾಗಿದೆ. 23 ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, [ll]ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ [mm]ಯಾವ ಪ್ರಯೋಜನವೂ ಉಂಟಾಗುವುದಿಲ್ಲ.

<- ಕೊಲೊಸ್ಸೆಯವರಿಗೆ 1ಕೊಲೊಸ್ಸೆಯವರಿಗೆ 3 ->