5 ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು. 6 ಮೋವಾಬ್ಯರ ದೇಶದಲ್ಲಿ ಬೇತ್‍ಪೆಗೋರದ ಎದುರಾಗಿರುವ ಕಣಿವೆಯಲ್ಲಿ (ಯೆಹೋವನು) ಅವನ ದೇಹವನ್ನು ಸಮಾಧಿಮಾಡಿದನು; ಅವನ ಸಮಾಧಿ ಎಲ್ಲಿದೆಯೋ ಇಂದಿನ ವರೆಗೆ ಯಾರಿಗೂ ತಿಳಿಯದು. 7 ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ. 8 ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲರು ಮೋಶೆಗೋಸ್ಕರ ಮೂವತ್ತು ದಿನಗಳ ವರೆಗೆ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.
9 ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.
10 ಮೋಶೆಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ, ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. 11 ಆತನು ಐಗುಪ್ತದೇಶದಲ್ಲಿ ಫರೋಹನ ಮುಂದೆಯೂ, ಅವನ ಪ್ರಜಾಪರಿವಾರದವರ ಮುಂದೆಯೂ ವಿಧವಿಧವಾದ ಅದ್ಭುತಕಾರ್ಯಗಳನ್ನು ಮತ್ತು ಮಹತ್ಕಾರ್ಯಗಳನ್ನು ನಡಿಸುವುದಕ್ಕೆ ಯೆಹೋವನು ಅವನನ್ನು ಕಳುಹಿಸಿದನು. 12 ಅವನು ಇಸ್ರಾಯೇಲರ ಕಣ್ಣ ಮುಂದೆ ವಿಶೇಷವಾದ ಭುಜಪರಾಕ್ರಮವನ್ನೂ ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು.
<- ಧರ್ಮೋಪದೇಶಕಾಂಡ 33