5 ಅಷ್ಟರಲ್ಲಿ ಫರೋಹನ ಮಗಳು ಸ್ನಾನಕ್ಕಾಗಿ ನೈಲ್ ನದಿಯ ಬಳಿಗೆ ಬಂದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ಪೆಟ್ಟಿಗೆಯನ್ನು ಕಂಡು, ದಾಸಿಯೊಬ್ಬಳನ್ನು ಕಳುಹಿಸಿ ಅದನ್ನು ತರಿಸಿದಳು. 6 ಪೆಟ್ಟಿಗೆಯನ್ನು ತೆರೆದು ನೋಡುವಾಗ, ಆಹಾ! ಅಳುವ ಕೂಸು. ಆಕೆಗೆ ಅದರ ಮೇಲೆ ಕನಿಕರಹುಟ್ಟಿ, “ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿರಬಹುದು” ಎಂದುಕೊಂಡಳು. 7 ಆಗಲೇ ಮಗುವಿನ ಅಕ್ಕ ಬಂದು, “ಫರೋಹನ ಮಗಳಿಗೆ ನಿನಗೋಸ್ಕರ ಈ ಕೂಸನ್ನು ಮೊಲೆಕೊಟ್ಟು ಸಾಕುವುದಕ್ಕೆ ಇಬ್ರಿಯ ಸ್ತ್ರೀಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೋ?” ಎಂದು ಕೇಳಿದಳು. 8 ಫರೋಹನ ಮಗಳು ಆಕೆಗೆ, “ಹೋಗು ಕರೆದುಕೊಂಡು ಬಾ” ಎಂದಳು. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದುತಂದಳು. 9 ಫರೋಹನ ಮಗಳು ಮಗುವಿನ ತಾಯಿಗೆ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನಗೋಸ್ಕರ ಹಾಲುಕೊಟ್ಟು ಸಾಕಬೇಕು. ನಾನು ನಿನಗೆ ಸಂಬಳವನ್ನು ಕೊಡುವೆನು” ಎಂದು ಹೇಳಿದಳು. ಆ ಸ್ತ್ರೀಯು ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು. 10 ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. “ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,” ಎಂದು ಹೇಳಿ ಆಕೆಯು ಅವನಿಗೆ “ಮೋಶೆ[a]” ಎಂದು ಹೆಸರಿಟ್ಟಳು.
16 ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು. 17 ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು. 18 ಆ ನಂತರ ಆ ಹೆಣ್ಣುಮಕ್ಕಳು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿದ್ದಿರಲ್ಲ?” ಎಂದು ಕೇಳಿದನು. 19 ಅದಕ್ಕೆ ಅವರು, “ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು” ಅಂದರು. 20 ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.
21 ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು. 22 ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.
- a ಮೋಶೆ ಅಂದರೆ ನೀರಿನೊಳಗಿನಿಂದ ಎಳೆಯಲ್ಪಟ್ಟವನು.