4 ನಿನ್ನ ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗಿರಲಾಗಿ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೋಗಿ ಒಪ್ಪಿಸಬೇಕು. 5 ನಿನ್ನನ್ನು ಹಗೆಮಾಡುವವನ ಕತ್ತೆಯ ಹೊರೆಯ ಕೆಳಗೆ ಬಿದ್ದಿರುವುದನ್ನು ಕಂಡರೆ, ಅದನ್ನು ಎಬ್ಬಿಸುವುದಕ್ಕೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಎಬ್ಬಿಸಲೇಬೇಕು.
6 ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು. 7 ಮೋಸದ ಕಾರ್ಯಕ್ಕೆ ದೂರವಾಗಿರಬೇಕು. ನಿರಪರಾಧಿಯೂ, ನೀತಿವಂತನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇಬಾರದು. ಅಂಥ ದುಷ್ಟನಿಗೆ ನಾನು ಶಿಕ್ಷೆಯನ್ನು ವಿಧಿಸದೇ ಬಿಡುವುದಿಲ್ಲ. 8 ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು *ಅಧಿಕಾರಿಗಳು.ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
9 ಪರದೇಶದವನಿಗೆ ಉಪದ್ರವವನ್ನು ಕೊಡಬಾರದು. ನೀವೂ ಐಗುಪ್ತದೇಶದಲ್ಲಿ ಪರದೇಶದವರಾಗಿದ್ದೀರಷ್ಟೇ. ಅಂಥವರ ಮನೋವ್ಯಥೆಯನ್ನು ತಿಳಿದವರಾಗಿದ್ದೀರಿ.
12 ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.
13 ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.
14 ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು. 15 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.
16 ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು. 17 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.
18 ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು. 19 ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
24 ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು. 25 ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು. 26 ನಿಮ್ಮ ದೇಶದಲ್ಲಿ ಗರ್ಭಪಾತವಾಗಲಿ, ಬಂಜೆತನವಾಗಲಿ ಇರುವುದೇ ಇಲ್ಲ. ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ದಯಪಾಲಿಸುವೆನು.
27 ನೀವು ಹೋಗುವ ಎಲ್ಲಾ ಕಡೆಗಳಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನುಂಟು ಮಾಡಿ ಅವರನ್ನು ಕಳವಳಗೊಳಿಸಿ, ನಿಮ್ಮ ವಿರೋಧಿಗಳೆಲ್ಲರೂ ಓಡಿಹೋಗುವಂತೆ ಮಾಡುವೆನು. 28 ಅದಲ್ಲದೆ ಕಡಜದ ಹುಳಗಳನ್ನು ನಿಮಗೆ ಮುಂಚಿತವಾಗಿ ಕಳುಹಿಸಿ ಹಿವ್ವಿಯರು, ಕಾನಾನ್ಯರು, ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವಂತೆ ಮಾಡುವೆನು. 29 ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯಾದೀತು. 30 ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು. 31 ಕೆಂಪುಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಲ್ಲಿರುವ ಸಮುದ್ರದವರೆಗೂ ಮತ್ತು ಈ ಅರಣ್ಯದಿಂದ ಯೂಫ್ರೆಟಿಸ್ ಮಹಾನದಿಯವರೆಗೂ ಇರುವ ದೇಶವನ್ನೆಲ್ಲಾ ನಿಮಗಾಗಿ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು. ನೀವು ಅವರನ್ನು ಹೊರಡಿಸುವಿರಿ. 32 ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು. 33 ಅವರು ನಿಮ್ಮ ದೇಶದಲ್ಲೇ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರುದ್ಧವಾಗಿ ನೀವು ಪಾಪ ಮಾಡುವಂತೆ ಅವರು ಪ್ರೇರೇಪಿಸುವರು. ‡ಅವರು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವದು.ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯು ನಿಮಗೆ ಉರುಲಾಗುವುದು.
<- ವಿಮೋಚನಕಾಂಡ 22ವಿಮೋಚನಕಾಂಡ 24 ->