3 ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು. 4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು. 5 ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು. 6 ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು. 7 ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು. 8 ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.
15 ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು. 16 ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು. 17 ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು. 18 ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.
<- ವಿಮೋಚನಕಾಂಡ 23ವಿಮೋಚನಕಾಂಡ 25 ->