1 ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು. 2 ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು. 3 ಐದೈದು ಬಟ್ಟೆಯ ಪರದೆಗಳನ್ನು ಒಂದೊಂದಾಗಿ ಜೋಡಿಸಬೇಕು. 4 ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು. 5 ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು. 6 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.
7 ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು. 8 ಒಂದೊಂದು ಪರದೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು. 9 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನು ಒಂದಾಗಿ ಜೋಡಿಸಿ ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ಇರಿಸಬೇಕು. 10 ಹೀಗೆ ಜೋಡಿಸಿ ಹೆಣೆದ ಪರದೆಗಳ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು. 11 ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು. 12 ಹೊದಿಕೆಯ ಪರದೆಗಳಲ್ಲಿ ಅರ್ಧ ಪರದೆ ಹೆಚ್ಚಾಗಿರುವುದು, ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು. 13 ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು. 14 ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು *ಕೆಲವು ಅನುವಾದಗಳಲ್ಲಿ ಕಡಲು ಹಂದಿ.ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.
31 ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು. 32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು. 33 ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು. 34 ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು. 35 ಪರದೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇರಿಸಬೇಕು. ಮೇಜು ಉತ್ತರ ಭಾಗದಲ್ಲಿರಬೇಕು. 36 ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು. 37 ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.
<- ವಿಮೋಚನಕಾಂಡ 25ವಿಮೋಚನಕಾಂಡ 27 ->- a ಕೆಲವು ಅನುವಾದಗಳಲ್ಲಿ ಕಡಲು ಹಂದಿ.