1 ಯೆಹೋವನು ಮೋಶೆಗೆ ಹೀಗೆಂದನು, 2 “ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ. 3 ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ, 4 ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ, 5 ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ. 6 ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ. 7 ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು, 8 ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು, 9 ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ, 10 ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು, 11 ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.”
18 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.
<- ವಿಮೋಚನಕಾಂಡ 30ವಿಮೋಚನಕಾಂಡ 32 ->