3 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದ ಅರಸನಾದ ಫರೋಹನೇ,
4 “ನಾನು ನಿನ್ನ ದವಡೆಗಳಿಗೆ ಗಾಳ ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ, ಆ ಮೀನುಗಳ ಸಹಿತ ನಿನ್ನನ್ನು ನೈಲ್ ನದಿಯ ಮಧ್ಯದೊಳಗಿಂದ ಹೊರಗೆ ಎಳೆದು ಹಾಕುವೆನು.
8 “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ, ಜನರನ್ನೂ, ಪಶುಗಳನ್ನೂ ನಿನ್ನೊಳಗಿಂದ ನಿರ್ಮೂಲ ಮಾಡುವೆನು. 9 ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು. 10 ‘ಇಗೋ, ನಾನು ನಿನಗೂ, ನಿನ್ನ ನದಿಗೂ ವಿರುದ್ಧವಾಗಿ ಐಗುಪ್ತ ದೇಶವನ್ನು ಮಿಗ್ದೋಲಿನಿಂದ ಸೆವೇನಿಯ ತನಕ, ಹೌದು, ಕೂಷಿನ ಮೇರೆಯವರೆಗೂ ತೀರಾ ಹಾಳು ಮಾಡುವೆನು.
11 “ ‘ಯಾವ ಮನುಷ್ಯನ ಪಾದವೂ ಅದರಲ್ಲಿ ಹಾದುಹೋಗುವುದಿಲ್ಲ; ಯಾವ ಪಶುವಿನ ಪಾದವೂ ಅದರಲ್ಲಿ ದಾಟಿಹೋಗುವುದಿಲ್ಲ; ನಲ್ವತ್ತು ವರ್ಷ ನಿರ್ಜನವಾಗಿರುವುದು. 12 ಹಾಳು ಬಿದ್ದಿರುವ ದೇಶಗಳ ಮಧ್ಯದಲ್ಲಿ ಐಗುಪ್ತ ದೇಶವನ್ನೂ ಹಾಳುಮಾಡುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲ್ವತ್ತು ವರ್ಷ ಹಾಗೆಯೇ ಇರುವುದು; ನಾನು ಐಗುಪ್ತ್ಯರನ್ನು ಜನಾಂಗಗಳಲ್ಲಿ ಚದುರಿಸಿ, ದೇಶದೇಶಗಳಲ್ಲಿ ಚದುರಿಸುವೆನು.’ ”
13 “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಲ್ವತ್ತು ವರ್ಷಗಳ ಮೇಲೆ ನಾನು ಐಗುಪ್ತ್ಯರನ್ನು ಅವರು ಚದುರಿ ಹೋಗಿದ್ದ ಜನಾಂಗಗಳೊಳಗಿಂದ ಅವರನ್ನು ಒಟ್ಟುಗೂಡಿಸುವೆನು. 14 ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು. 15 ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಅದು ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣ ಸ್ಥಿತಿಗೆ ತರುವೆನು. 16 ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’ ” ಎಂದು ಅವರಿಗೆ ತಿಳಿಯುವುದು.
21 “ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”
<- ಯೆಹೆಜ್ಕೇಲನು 28ಯೆಹೆಜ್ಕೇಲನು 30 ->