4 [e]ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು? 5 ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, [f]ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
6 [g]ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ. 7 ಆದ್ದರಿಂದ [h]ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.
8 [i]ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, [j]“ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು. 9 ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.
10 [k]ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, [l]“ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ. 11 ಇದಲ್ಲದೆ [m]ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ [n]“ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.
12 ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, [o]“ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.
13 ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ [p]ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ [q]“ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
14 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ [r]ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು [s]ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ [t]ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.
17 ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, [y]ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ. 18 ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. [z]ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
19 ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು [aa]ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
20 ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ.
23 ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ [bb]ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ [cc]ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು. 24 [dd]ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು. 25 ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ. 26 ಹಾಗೆ [ee]ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
27 ಹೇಗೆಂದರೆ [ff]ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ [gg]ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. 28 [hh]ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ [ii]ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, [jj]ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. 29 [kk]ನೀವು ಕ್ರಿಸ್ತನವರಾಗಿದ್ದರೆ [ll]ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ [mm]ಬಾಧ್ಯರೂ ಆಗಿದ್ದೀರಿ.
<- ಗಲಾತ್ಯದವರಿಗೆ 2ಗಲಾತ್ಯದವರಿಗೆ 4 ->- a 1 ಕೊರಿ 1:23; ಅರಣ್ಯ 21:9
- b ಗಲಾ. 3:14; ಎಫೆ 1:13; ಇಬ್ರಿ. 6:4; ಅ. ಕೃ. 15:8
- c ರೋಮಾ. 10:17
- d ಫಿಲಿ. 1:6; ಗಲಾ. 4:9
- e ಇಬ್ರಿ. 10:35; 2 ಯೋಹಾ 8
- f ವ. 12
- g ಆದಿ 12:3; 18:18
- h ವ. 9
- i ರೋಮಾ. 3:30
- j ಆದಿ 12:3; 18:18
- k ಗಲಾ. 5:4; ರೋಮಾ. 1:17; ಇಬ್ರಿ. 10:38
- l ಧರ್ಮೋ 27:26; ಯೆರೆ 11:3
- m ಗಲಾ. 2:16
- n ಹಬ 2:4; ರೋಮಾ. 1:17; ಇಬ್ರಿ. 10:38
- o ಯಾಜ 18:5; ರೋಮಾ. 10:5
- p ಗಲಾ. 4:5
- q ಧರ್ಮೋ 21:23
- r ರೋಮಾ. 4:9,16
- s ಅ. ಕೃ. 2:33; ಯೆಶಾ 32:15; 44:3; ಯೋವೇ. 2:28; ಯೋಹಾ 7:39; ಎಫೆ 1:13
- t ವ. 2
- u ರೋಮಾ. 3:5
- v ಇಬ್ರಿ. 9:17
- w ರೋಮಾ. 4:13, 16; ಲೂಕ 1:55; ಅ. ಕೃ. 13:32
- x ಆದಿ 12:7; 13:15; 17:7,8; 22:18
- y ವಿಮೋ 12:40,41; ಆದಿ 15:13; ಅ. ಕೃ. 7:6
- z ಇಬ್ರಿ. 6:13,14
- aa ವ. 16
- bb 1 ಪೇತ್ರ 1:5
- cc ನೇಮನಿಷ್ಠೆಗಳ
- dd ಗಲಾ. 3:11; 2:16
- ee ಗಲಾ. 4:5,6
- ff ರೋಮಾ. 6:3
- gg ರೋಮಾ. 13:14
- hh ಯೋಹಾ 10:16; 17:11; 1 ಕೊರಿ 10:17; ಎಫೆ 2:14-16; 4:4
- ii ಗಲಾ. 3:14; 5:6; 6:15; ರೋಮಾ. 3:30; 8:17; ಎಫೆ 3:6
- jj 1 ಕೊರಿ 11:11
- kk 1 ಕೊರಿ 3:23
- ll ರೋಮಾ. 9:7
- mm ಗಲಾ. 4:1,7; ರೋಮಾ. 8:17; ಎಫೆ 3:6