3 “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು. 4 ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
5 ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು. 6 ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ. 7 ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.
8 ಯೆಹೋವನು ಅದೇ ಪ್ರಕಾರ ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿ ಬಿಟ್ಟನು. ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು. 9 ಸಮಸ್ತ ಲೋಕದ ಭಾಷೆಯನ್ನು ಯೆಹೋವನು ಅಲ್ಲಿ ಗಲಿಬಿಲಿ ಮಾಡಿ, ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿದ್ದರಿಂದ ಆ ಪಟ್ಟಣಕ್ಕೆ [b]ಬಾಬೆಲ್ (ದೇವರ ಬಾಗಿಲು) ಎಂಬ ಹೆಸರಾಯಿತು.
12 ಅರ್ಪಕ್ಷದನು ಮೂವತ್ತೈದು ವರ್ಷದವನಾಗಿ ಶೆಲಹನನ್ನು ಪಡೆದನು. 13 ಅರ್ಪಕ್ಷದನು ಶೆಲಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
14 ಶೆಲಹನು ಮೂವತ್ತನಾಲ್ಕು ವರ್ಷದವನಾಗಿ ಎಬರನನ್ನು ಪಡೆದನು. 15 ಶೆಲಹನು ಎಬರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದನು.
16 ಎಬರನು ಮೂವತ್ತನಾಲ್ಕು ವರ್ಷದವನಾಗಿ ಪೆಲೆಗನನ್ನು ಪಡೆದನು. 17 ಎಬರನು ಪೆಲೆಗನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂವತ್ತು ವರ್ಷ ಬದುಕಿದನು.
18 ಪೆಲೆಗನು ಮೂವತ್ತು ವರ್ಷದವನಾಗಿ ರೆಗೂವನನ್ನು ಪಡೆದನು. 19 ಪೆಲೆಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಒಂಭತ್ತು ವರ್ಷ ಬದುಕಿದನು.
20 ರೆಗೂವನು ಮೂವತ್ತೆರಡು ವರ್ಷದವನಾಗಿ ಸೆರೂಗನನ್ನು ಪಡೆದನು. 21 ಸೆರೂಗನು ರೆಗೂವನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರ ಏಳು ವರ್ಷ ಬದುಕಿದನು.
22 ಸೆರೂಗನು ಮೂವತ್ತು ವರ್ಷದವನಾಗಿ ನಾಹೋರನನ್ನು ಪಡೆದನು. 23 ಸೆರೂಗನು ನಾಹೋರನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಇನ್ನೂರು ವರ್ಷ ಬದುಕಿದನು.
24 ನಾಹೋರನು ಇಪ್ಪತ್ತೊಂಭತ್ತು ವರ್ಷದವನಾಗಿ ತೆರಹನನ್ನು ಪಡೆದನು. 25 ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು.
26 ತೆರಹನು ಎಪ್ಪತ್ತು ವರ್ಷದವನಾಗಿ ಅಬ್ರಾಮ, ನಾಹೋರ್, ಹಾರಾನ್ ಎಂಬ ಮಕ್ಕಳನ್ನು ಪಡೆದನು.
31 ತೆರಹನು ತನ್ನ ಮಗನಾದ ಅಬ್ರಾಮನನ್ನೂ, ತನಗೆ ಮೊಮ್ಮಗನೂ, ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ, ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗಬೇಕೆಂದು ಕಲ್ದೀಯರ ಊರ್ ಎಂಬ ಪಟ್ಟಣವನ್ನು ಬಿಟ್ಟು ಅವರು ಹಾರಾನ ಪಟ್ಟಣಕ್ಕೆ ಬಂದು ಅಲ್ಲೇ ವಾಸಮಾಡಿಕೊಂಡರು.
32 ತೆರಹನು ಇನ್ನೂರ ಐದು ವರ್ಷ ಬದುಕಿ ನಂತರ ಹಾರಾನಿನಲ್ಲಿ ಸತ್ತನು.
<- ಆದಿಕಾಂಡ 10ಆದಿಕಾಂಡ 12 ->