4 ಯೆಹೋವನು ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು. 5 ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ತಮ್ಮನ ಮಗನಾದ ಲೋಟನನ್ನೂ, ತಾನೂ ಲೋಟನೂ ಹಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ, ದಾಸ ದಾಸಿಯರನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ಬಂದನು.
6 ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಸ್ಥಳದಲ್ಲಿರುವ ಮೋರೆ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು. 7 ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನದಲ್ಲಿ, “ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು” ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.
8 ಅವನು ಅಲ್ಲಿಂದ ಹೊರಟು ಬೇತೇಲಿನ ಪೂರ್ವದಲ್ಲಿರುವ ಗುಡ್ಡಕ್ಕೆ ಬಂದು ತನ್ನ ಗುಡಾರವನ್ನು ಹಾಕಿ ಇಳಿದುಕೊಂಡನು. ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರುಗಳಿದ್ದವು. ಅಲ್ಲಿಯೂ ಅಬ್ರಾಮನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಆತನ ಹೆಸರಿನಲ್ಲಿ ಆರಾಧಿಸಿದನು. 9 ತರುವಾಯ ಅಬ್ರಾಮನು ಅಲ್ಲಿಂದ ಹೊರಟು ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಹೋದನು.
14 ಅಬ್ರಾಮನು ಐಗುಪ್ತ ದೇಶಕ್ಕೆ ಬಂದಾಗ ಐಗುಪ್ತರು ಅವನ ಸಂಗಡ ಇದ್ದ ಸ್ತ್ರೀಯನ್ನು ನೋಡಿ ಬಹು ಸುಂದರಿ ಎಂದು ಅಂದುಕೊಂಡರು. 15 ಫರೋಹನ ರಾಜಕುಮಾರರು ಆಕೆಯನ್ನು ನೋಡಿ ಬಂದು, ಅವನ ಮುಂದೆ ಹೊಗಳಲಾಗಿ ಫರೋಹನು ಆ ಸ್ತ್ರೀಯನ್ನು ಅರಮನೆಗೆ ಕರೆಯಿಸಿ ಆಕೆಯ ನಿಮಿತ್ತ ಅಬ್ರಾಮನಿಗೆ ಉಪಕಾರ ಮಾಡಿದನು. 16 ಆಗ ಅಬ್ರಾಮನಿಗೆ ಕುರಿ, ಎತ್ತು, ಗಂಡು, ಹೆಣ್ಣು ಕತ್ತೆಗಳು, ದಾಸದಾಸಿಯರು, ಒಂಟೆಗಳು, ದೊರಕಿದವು.
17 ಆದರೆ ಯೆಹೋವನು ಫರೋಹನಿಗೂ ಅವನ ಮನೆಯವರಿಗೂ ಅಬ್ರಾಮನ ಹೆಂಡತಿಯಾದ ಸಾರಯಳ ನಿಮಿತ್ತ ಬಹಳ ಉಪದ್ರವಗಳಿಂದ ಬಾಧಿಸಿದನು. 18 ಆಗ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ಏಕೆ ಹೀಗೆ ಮಾಡಿದೆ? ಆಕೆ ನಿನ್ನ ಹೆಂಡತಿಯೆಂದು ಏಕೆ ನನಗೆ ತಿಳಿಸಲಿಲ್ಲ? 19 ತಂಗಿಯೆಂದು ಯಾಕೆ ಹೇಳಿದೆ? ಹೀಗೆ ಹೇಳಿದ್ದರಿಂದ ಆಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡೆನಲ್ಲಾ. ಇಗೋ ನಿನ್ನ ಹೆಂಡತಿ; ಕರೆದುಕೊಂಡು ಹೋಗು” ಎಂದು ಹೇಳಿ, 20 ಫರೋಹನು ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಒಟ್ಟಿಗೆ ಸೇರಿಸಿ ಕಳುಹಿಸಿ ಬಿಟ್ಟರು.
<- ಆದಿಕಾಂಡ 11ಆದಿಕಾಂಡ 13 ->- a ಅಥವಾ ಜನ್ಮಸ್ಥಳದಿಂದ.