8 ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು. 9 ಆಗ ಅಬೀಮೆಲೆಕನು ಇಸಾಕನನ್ನು ಕರೆಯಿಸಿ, “ನಿಶ್ಚಯವಾಗಿ ಈಕೆಯ ನಿನ್ನ ಹೆಂಡತಿಯಲ್ಲವೇ, ತಂಗಿ ಎಂದು ಯಾಕೆ ಹೇಳಿದೆ” ಎಂದು ಕೇಳಲು ಇಸಾಕನು, “ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು” ಎಂದನು.
10 ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?”
11 ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು.
16 ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಬಹು ಬಲಿಷ್ಠನಾಗಿದ್ದೀ; 17 ಆದ್ದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು” ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬಯಲಿನಲ್ಲಿ ಬಿಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು. 18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.
19 ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು. 20 ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “[a]ಏಸೆಕ್” ಎಂದು ಹೆಸರಿಟ್ಟನು. 21 ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “[b]ಸಿಟ್ನಾ” ಎಂದು ಹೆಸರಿಟ್ಟನು. 22 ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “[c]ರೆಹೋಬೋತ್” ಎಂದು ಹೆಸರಿಟ್ಟನು.
25 ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.
26 ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು.
27 ನೀವು, “ನನ್ನನ್ನು ದ್ವೇಷಿಸಿ ನಿಮ್ಮ ಬಳಿಯಿಂದ ಕಳುಹಿಸಿ ಬಿಟ್ಟಿರಲ್ಲಾ; ಈಗ ನನ್ನ ಬಳಿಗೆ ಯಾಕೆ ಬಂದಿರಿ” ಎಂದು ಅವರನ್ನು ಕೇಳಿದ್ದಕ್ಕೆ ಅವರು, 28 “ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು. 29 ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.
30 ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ಭೋಜನ ಉಪಚಾರಗಳನ್ನು ಮುಗಿಸಿಕೊಂಡರು. 31 ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು.
32 ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು. 33 ಅವನು ಆ ಬಾವಿಗೆ “[d]ಷಿಬಾ” ಎಂದು ಹೆಸರಿಟ್ಟನು. ಆದುದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ “ಬೇರ್ಷೆಬ” ಎಂದು ಹೆಸರಾಯಿತು.