1 ಆಗ ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಕಾನಾನ್ಯರ ಹೆಣ್ಣನ್ನು ಮದುವೆಯಾಗಬಾರದು. 2 ಪದ್ದನ್ ಅರಾಮ್ ದೇಶದಲ್ಲಿರುವ ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೊರಟು ಹೋಗು. ಅಲ್ಲಿ ನಿನ್ನ ತಾಯಿಯ ಸಹೋದರನಾದ ಲಾಬಾನನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೋ. 3 ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ. 4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು. 5 ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಅಣ್ಣನಾದ ಅರಾಮಿನವನಾದ ಬೆತೂವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.
16 ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು. 17 ಅವನು ಭಯಪಟ್ಟವನಾಗಿ, “ಈ ಸ್ಥಳವು ಪವಿತ್ರವಾದ್ದದು. ಇದು ದೇವರ ಮನೆಯೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು” ಎಂದನು.
18 ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು. 19 ಇದಲ್ಲದೆ ಅವನು ಆ ಸ್ಥಳಕ್ಕೆ “[b]ಬೇತೇಲ್” ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ “ಲೂಜ್” ಎಂದು ಹೆಸರಿತ್ತು.
20 ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು, 21 ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು. 22 ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.
<- ಆದಿಕಾಂಡ 27ಆದಿಕಾಂಡ 29 ->