5 ಯಾಕೋಬನು ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾದ ವರ್ತಮಾನವನ್ನು ಕೇಳಿದಾಗ ಅವನ ಗಂಡುಮಕ್ಕಳು ಅಡವಿಯಲ್ಲಿ ದನಗಳನ್ನು ಕಾಯುತ್ತಿದ್ದರು. ಅವರು ಬರುವ ತನಕ ಅವನು ಸುಮ್ಮನೇ ಇದ್ದನು. 6 ಅಷ್ಟರಲ್ಲಿ ಶೆಕೆಮನ ತಂದೆಯಾದ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು. 7 ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
8 ಹಮೋರನು ಅವರಿಗೆ, “ನನ್ನ ಮಗನಾದ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಶೆಯಿಂದ ಮೋಹಿಸಿದ್ದಾನೆ, ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. 9 ಇದಲ್ಲದೆ ನೀವು ನಮ್ಮಲ್ಲೇ ವಾಸವಾಗಿದ್ದು ನಿಮ್ಮ ಹೆಣ್ಣು ಮಕ್ಕಳನ್ನು ನಮಗೆ ಕೊಡುತ್ತಾ ನಮ್ಮ ಹೆಣ್ಣುಮಕ್ಕಳನ್ನು ನೀವು ತೆಗೆದುಕೊಳ್ಳುತ್ತಾ ನಮ್ಮೊಂದಿಗೆ ಬೀಗರಾಗಿರಿ. 10 ದೇಶವೆಲ್ಲಾ ನಿಮ್ಮ ಮುಂದೆ ಇದೆ ಅಲ್ಲಿ ವಾಸಮಾಡಿಕೊಂಡು ವ್ಯಾಪಾರ ಮಾಡಿ, ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು” ಎಂದು ಹೇಳಿದನು.
11 ಬಳಿಕ ಶೆಕೆಮನು ಆ ಹುಡುಗಿಯ ತಂದೆಗೂ ಅಣ್ಣಂದಿರಿಗೂ, “ನಿಮ್ಮ ದಯೆ ನನ್ನ ಮೇಲೆ ಇರಲಿ, ನೀವು ಹೇಳುವಷ್ಟು ಕೊಡುತ್ತೇನೆ. 12 ನೀವು ಹೇಳುವ ಮೇರೆಗೆ ಎಷ್ಟಾದರೂ ತೆರವನ್ನೂ ಕಾಣಿಕೆಯನ್ನೂ ಹೆಣ್ಣಿಗಾಗಿ ಕೊಡುತ್ತೇನೆ. ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ” ಎಂದನು.
13 ಶೆಕೆಮನು ತಮ್ಮ ತಂಗಿಯಾದ ದೀನಳನ್ನು ಮಾನಭಂಗ ಮಾಡಿದ್ದರಿಂದ ಯಾಕೋಬನ ಮಕ್ಕಳು ಅವನಿಗೂ ಅವನ ತಂದೆಯಾದ ಹಮೋರನಿಗೂ ವಂಚನೆಯ ಉತ್ತರಕೊಟ್ಟರು. 14 ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವುದಕ್ಕಾಗುವುದಿಲ್ಲ, ಹಾಗೆ ಕೊಡುವುದು ನಮಗೆ ಅವಮಾನ. 15 ನಿಮ್ಮಲ್ಲಿನ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡು ನಮ್ಮ ಹಾಗೆ ಆಗಬೇಕು. ಹೀಗಾಗುವ ಪಕ್ಷದಲ್ಲಿ ಮಾತ್ರ ನಾವು ನಿಮ್ಮ ಮಾತಿಗೆ ಒಪ್ಪುವೆವು. 16 ನಮ್ಮ ಹೆಣ್ಣುಮಕ್ಕಳನ್ನು ನಿಮಗೆ ಕೊಡುತ್ತಾ ನಿಮ್ಮ ಹೆಣ್ಣುಮಕ್ಕಳನ್ನು ನಾವು ತೆಗೆದುಕೊಳ್ಳುತ್ತಾ ನಿಮ್ಮಲ್ಲಿ ವಾಸಮಾಡಿ ನಿಮ್ಮೊಂದಿಗೆ ಒಂದೇ ಕುಲವಾಗಿರುವೆವು. 17 ಆದರೆ ನೀವು ನಮ್ಮ ಮಾತಿಗೆ ಒಪ್ಪದೆ ಸುನ್ನತಿ ಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟು ಹೋಗುತ್ತೇವೆ” ಎಂದನು.
18 ಅವರ ಮಾತುಗಳು ಹಮೋರನಿಗೂ, ಅವನ ಮಗನಾದ ಶೆಕೆಮನಿಗೂ ಒಳ್ಳೆಯದೆಂದು ತೋಚಿತು. 19 ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿಕೊಂಡಿದ್ದರಿಂದ ಅವರು ಹೇಳಿದಂತೆ ಮಾಡುವುದಕ್ಕೆ ತಡಮಾಡಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು. 20 ಆಗ ಹಮೋರನೂ ಅವನ ಮಗನಾದ ಶೆಕೆಮನೂ ಊರ ಬಾಗಿಲಿಗೆ ಬಂದು ಊರಿನವರೆಲ್ಲರ ಸಂಗಡ ಮಾತನಾಡಿ ಅವರಿಗೆ, 21 “ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ನಮ್ಮ ದೇಶದಲ್ಲೇ ವಾಸ ಮಾಡಿಕೊಂಡು ವ್ಯಾಪಾರ ಮಾಡಲಿ. ಈ ದೇಶವು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣುಮಕ್ಕಳನ್ನು ಮದುವೆಮಾಡಿಕೊಳ್ಳೋಣ ನಮ್ಮ ಹೆಣ್ಣುಮಕ್ಕಳನ್ನು ಅವರಿಗೆ ಕೊಡೋಣ.
22 “ಆದರೆ ಅವರು ಸುನ್ನತಿ ಮಾಡಿಸಿಕೊಂಡವರಾದ್ದರಿಂದ ನಮ್ಮಲ್ಲಿಯೂ ಪುರುಷರೆಲ್ಲರು ಸುನ್ನತಿ ಮಾಡಿಸಿಕೊಳ್ಳಬೇಕನ್ನುತ್ತಾರೆ. ಹೀಗಾದರೆ ಮಾತ್ರ ಅವರು ನಮ್ಮಲ್ಲಿ ವಾಸ ಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುವರು. 23 ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.
24 ಆಗ ಪಟ್ಟಣದ ದ್ವಾರದಲ್ಲಿ ಹೋಗುವವರೆಲ್ಲಾ, ಹಮೋರನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಸಿದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.
30 ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು. 31 ಅದಕ್ಕೆ ಅವರು, “ನಮ್ಮ ತಂಗಿಯನ್ನು ವೇಶ್ಯೆಯಂತೆ ಉಪಯೋಗಿಸಿಕೊಂಡಿದ್ದು ಸರಿಯೇ” ಎಂದು ಕೇಳಿದರು.
<- ಆದಿಕಾಂಡ 33ಆದಿಕಾಂಡ 35 ->