1 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು. 2 ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು. 3 ನಲ್ವತ್ತು ದಿನಗಳು ಸುಗಂಧದ್ರವ್ಯಗಳನ್ನು ತುಂಬುವ ಪದ್ಧತಿಯಿರುವುದರಿಂದ ಅಷ್ಟು ದಿನ ಸಿದ್ಧಪಡಿಸುತ್ತಾ ಇದ್ದರು. ಐಗುಪ್ತರು ಅವನಿಗೋಸ್ಕರ ಎಪ್ಪತ್ತು ದಿನ ಶೋಕಾಚರಣೆಯಲ್ಲಿದ್ದರು.
4 ಶೋಕಾಚರಣೆಯು ಮುಗಿದ ನಂತರ ಯೋಸೇಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ, 5 ‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’ ” ಎಂದನು.
6 ಫರೋಹನು ಈ ಸಂಗತಿಯನ್ನು ಕೇಳಿ ಯೋಸೇಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು” ಎಂದು ಅಪ್ಪಣೆಕೊಟ್ಟನು.
7 ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ 8 ಯೋಸೇಫನ ಮನೆಯವರೆಲ್ಲರೂ, ಅಣ್ಣತಮ್ಮಂದಿರೂ, ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನು ಕುರಿದನಗಳನ್ನು ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು. 9 ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.
10 ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಶೋಕಾಚರಿಸಿದನು. 11 ಆ ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಈ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ “[a]ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು.
12 ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು. 13 ಅವನ ಶವವನ್ನು ಕಾನಾನ್ ದೇಶಕ್ಕೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗುಹೆಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂಮಿ ಸಹಿತ ಸ್ವಂತ ಸ್ಮಶಾನ ಭೂಮಿಯನ್ನಾಗಿ ಕೊಂಡುಕೊಂಡಿದ್ದನು.
14 ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು.
18 ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು. 19 ಯೋಸೇಫನು ಅವರಿಗೆ, “ಹೆದರಬೇಡಿರಿ, ನಾನೇನು ದೇವರ ಸ್ಥಾನದಲ್ಲಿ ಇದ್ದೇನೋ? 20 ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು. 21 ಆದುದರಿಂದ ನೀವು ಸ್ವಲ್ಪವೂ ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮಗೆ ಸೇರಿದವರೆಲ್ಲರನ್ನೂ ಪೋಷಿಸುವೆನು. ಎಂದು ಹೇಳಿ ಅವರನ್ನು ಸಂತೈಸಿ ಅವರ ಸಂಗಡ ಪ್ರೀತಿಯಿಂದ ಮಾತನಾಡಿದನು.
24 ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ. 25 ಇದಲ್ಲದೆ ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸುವನು. ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು” ಎಂದು ಅವರಿಂದ ಪ್ರಮಾಣಮಾಡಿಸಿದನು.
26 ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು.
<- ಆದಿಕಾಂಡ 49- a ಐಗುಪ್ತ್ಯರ ಶೋಕ.