8 ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ, 9 “ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು. 10 ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ. 11 ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.
12 ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು. 13 ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ. 14 ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು. 15 ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ. 16 ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.
17 ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.
20 ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ. 21 ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು. 22 ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು. 23 ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.
24 ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು, 25 “ಕಾನಾನನು
26 ಅವನು ಇನ್ನೂ ನುಡಿದದ್ದೇನೆಂದರೆ,
28 ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರ್ಷ ಬದುಕಿದನು. 29 ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು.
<- ಆದಿಕಾಂಡ 8ಆದಿಕಾಂಡ 10 ->