11 ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ [k]ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು? 12 ಯಾಜಕತ್ವವು ಬದಲಾಗುವುದಾದರೆ ಧರ್ಮಶಾಸ್ತ್ರವೂ ಸಹ ಬದಲಾಗುವುದು ಅಗತ್ಯವಾಗಿದೆ. 13 ಆದರೆ [l]ಇವು ಯಾರ ಕುರಿತಾಗಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಒಬ್ಬನೂ ಯಜ್ಞವೇದಿಯ ಬಳಿ ಸೇವೆಮಾಡಿದ್ದಿಲ್ಲ. 14 [m]ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ. 15-16 ಈ ಯಾಜಕನು ಶರೀರದ ಸಂಬಂಧಪಟ್ಟಿರುವ ನಿಯಮದ ಪ್ರಕಾರವಾಗಿರದೆ, ಲಯವಾಗದ ಜೀವಶಕ್ತಿಯ ಮೇರೆಗೆ, ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಎಳುತ್ತಾನೆಂಬುದಾದರೆ ಅದು ಇನ್ನೂ ಹೆಚ್ಚು ಸ್ಪಷ್ಟವಾಗಿ ವ್ಯಕ್ತವಾಗುತ್ತದಲ್ಲಾ. 17 ಆತನ ವಿಷಯದಲ್ಲಿ [n]“ನೀನು ಸದಾಕಾಲಕ್ಕೂ ಮೆಲ್ಕಿಜೆದೇಕನ ತರಹದ ಯಾಜಕನೇ” ಎಂಬುದಾಗಿ ಧರ್ಮಶಾಸ್ತ್ರವು ಸಾಕ್ಷಿಕರಿಸುತ್ತದೆ. 18 ಯಾಕೆಂದರೆ ಮೊದಲಿದ್ದ ಆಜ್ಞೆಯು [o]ದುರ್ಬಲವೂ, ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು. 19 [p]ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ [q]ಉತ್ತಮವಾದ ಹೊಸ [r]ನಿರೀಕ್ಷೆಯೊಂದು ಕೊಡಲ್ಪಟ್ಟಿದೆ. 20 ಇದು ಪ್ರತಿಜ್ಞೆ ರಹಿತವಾದ್ದದು ಅಲ್ಲ. ಇದಲ್ಲದೆ ಲೇವಿಯರು ಪ್ರತಿಜ್ಞೆಯಿಲ್ಲದೆ ಯಾಜಕರಾದರು. 21 ಆತನಾದರೋ, ಪ್ರತಿಜ್ಞೆಯೊಡನೆ ಯಾಜಕನಾಗಿ ಮಾಡಲ್ಪಟ್ಟನು. ಆದರೆ ದೇವರು ಆತನಿಗೆ
26 ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು [x]ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, [y]ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, [z]ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು. 27 [aa]ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು [bb]ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು. 28 ಧರ್ಮಶಾಸ್ತ್ರವು [cc]ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ [dd]ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.
<- ಇಬ್ರಿಯರಿಗೆ 6ಇಬ್ರಿಯರಿಗೆ 8 ->- a ಆದಿ 14:17-20:
- b ಆದಿ 33:18; ಕೀರ್ತ 76:2:
- c ಅರಣ್ಯ 24:16; ಧರ್ಮೋ 32:8; ಮಾರ್ಕ 5:7:
- d ಅಥವಾ, ಅವನು ಹುಟ್ಟಿದ್ದಾಗಲಿ ಕಾಲವಾಗಿ ಹೋದದ್ದಾಗಲಿ ಬರೆದಿಲ್ಲ. ವ. 6:
- e ಕೀರ್ತ 110:4:
- f ಅ. ಕೃ. 7:8,9:
- g ಅರಣ್ಯ 18:21,26; 2 ಪೂರ್ವ 31:4,5:
- h ವ. 3:
- i ರೋಮಾ. 4:13:
- j ಇಬ್ರಿ. 5:6; 6:20; ಲೂಕ 24:5:
- k ಇಬ್ರಿ. 7:18,19; 8:7; ಗಲಾ. 2:21:
- l ಎಂದರೆ ಕೀರ್ತ 110:4:
- m ಯೆಶಾ 11:1; ಮೀಕ 5:2; ಮತ್ತಾ 1:3; ಲೂಕ 3:33; ಪ್ರಕ 5:5:
- n ಕೀರ್ತ 110:4; ಇಬ್ರಿ. 5:6; 7:21:
- o ರೋಮಾ. 8:3; ಗಲಾ. 4:9:
- p ಇಬ್ರಿ. 9:9; 10:1; ಯಾಜ 16:16; ಅ. ಕೃ. 13:39:
- q ಇಬ್ರಿ. 6:18:
- r ವ. 25; ಇಬ್ರಿ. 4:16:
- s ವ. 17:
- t ಇಬ್ರಿ. 8:6:
- u ಇಬ್ರಿ. 7:21,28:
- v ವ. 19; ಯೋಹಾ 14:6:
- w ಇಬ್ರಿ. 9:24; ರೋಮಾ. 8:34:
- x ಕೀರ್ತ 16:10; ಪ್ರಕ 15:4; 16:5:
- y ಇಬ್ರಿ. 4:15:
- z ಇಬ್ರಿ. 8:1; 4:14:
- aa ಇಬ್ರಿ. 5:3:
- bb ಇಬ್ರಿ. 9:12,28; 10:10:
- cc ಇಬ್ರಿ. 5:2:
- dd ಇಬ್ರಿ. 2:10; 5:9: