6 ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು. 7 ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು. 8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ. 9 ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
10 ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.
<- ಯೋನನು 2ಯೋನನು 4 ->