13 ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 14 “ದೂಷಿಸಿದ ಆ ಮನುಷ್ಯನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. 15 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು. 16 ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.
17 “ ‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು. 18 ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು. 19 ಯಾವನಾದರೂ ಮತ್ತೊಬ್ಬನನ್ನು ಅಂಗಹೀನಮಾಡಿದರೆ ಅವನು ಮಾಡಿದಂತೆಯೇ ಅವನಿಗೆ ಮಾಡಿಸಬೇಕು. 20 ಅವಯವವನ್ನು ಮುರಿದವನಿಗೆ ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗೆಸಬೇಕು. ಮತ್ತೊಬ್ಬನನ್ನು ಅಂಗಹೀನ ಮಾಡಿದವನಿಗೆ ಈ ಪ್ರಕಾರ ಪ್ರತಿಕಾರ ಮಾಡಬೇಕು. 21 ಪಶುವನ್ನು ಕೊಂದವನು ಅದಕ್ಕೆ ಬದಲಾಗಿ ಈಡು ಕೊಡಬೇಕು. ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು. 22 ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’ ” ಎಂಬುದೇ.
23 ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.
<- ಯಾಜಕಕಾಂಡ 23ಯಾಜಕಕಾಂಡ 25 ->- a ಆರಾರು ಸೇರಿನದಾಗಿರಬೇಕು ಅಥವಾ ಏಫಾದ ಹತ್ತರಲ್ಲಿ ಎರಡನೆಯ ಭಾಗ.