1 ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ? 2 ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು. 3 ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. 4 ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
20 ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ. 21 ‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.
22 ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ. 23 ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ. 24 ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು. 25 ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು. 26 ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು. 27 ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು. 28 ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. 29 ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು. 30 ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು. 31 ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು. 32 ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ. 33 ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು. 34 ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು. 35 ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.” 36 [a]“ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು. 37 ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.
<- ಲೂಕನು 16ಲೂಕನು 18 ->- a ಕೆಲವು ಪ್ರತಿಗಳಲ್ಲಿ ಈ ವಚನವಿಲ್ಲ.