5 “ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು. 6 ಅವರ ಬಾಯಲ್ಲಿ ಸತ್ಯಬೋಧನೆಯು ನೆಲೆಸಿತ್ತು, ಅವರ ತುಟಿಗಳಲ್ಲಿ ಅಪವಾದದ ಮಾತುಗಳು ಬರಲಿಲ್ಲ. ಅವರು ಶಾಂತಿಯಿಂದಲೂ, ಸದ್ಧರ್ಮದಿಂದಲೂ ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಬಹು ಜನರನ್ನು ಪಾಪದ ಕಡೆಯಿಂದ ತಿರುಗಿಸಿದರು. 7 ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;
8 “ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. 9 “ನೀವು ನನ್ನ ಮಾರ್ಗಗಳನ್ನು ಅನುಸರಿಸದೆ ನಿಮ್ಮ ಧರ್ಮನಿಯಮ ಉಪದೇಶದಲ್ಲಿ ಪಕ್ಷಪಾತ ತೋರಿಸಿದ್ದರಿಂದ ನಾನಂತೂ ನಿಮ್ಮನ್ನು ಎಲ್ಲಾ ಜನರ ಮುಂದೆ ಅವಮಾನ ಹೊಂದುವಂತೆ ಅವರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.”
14 “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ. 15 ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.” 16 ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನಾನು ಪತ್ನಿತ್ಯಾಗವನ್ನೂ, ಹೆಂಡತಿಗೆ ಅನ್ಯಾಯ ಮಾಡುವವನನ್ನೂ ಹಗೆಮಾಡುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ.”
- a ಲೇವಿಯರೊಂದಿಗೆ ಲೇವಿ ಸಂತಾನದವರು.