1 ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು. 2 ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, 3 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 4 ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು. 5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ. 6 ಆದರೆ[a]ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
7 “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ. 8 [b]ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. 9 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. 10 ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ[c]ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ. 11 ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.[d]
18 “ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 19 [i]ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ. 20 ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.
- a ಲೂಕ 17:1, 2:
- b ಮತ್ತಾ 5:29, 30; ಮಾರ್ಕ 9:43-47:
- c ಕೀರ್ತ 34:7; ಲೂಕ 1:19; ಇಬ್ರಿ. 1:14:
- d 11 ನೆಯ ವಚನ ಮೂಲಗ್ರಂಥದಲ್ಲಿ ಇಲ್ಲ; ಲೂಕ 19:10 ನೋಡಿರಿ. ಮನುಷ್ಯಕುಮಾರನು ಕಳೆದುಹೋಗಿರುವುದನ್ನು ಹುಡುಕಿ ರಕ್ಷಿಸುವುದಕೋಸ್ಕರ ಬಂದನು.
- e ಲೂಕ 15:4, 7:
- f ಕೆಲವು ಪ್ರತಿಗಳಲ್ಲಿ, ನಿನಗೆ ತಪ್ಪುಮಾಡಿದರೆ ಎಂದು ಬರೆದದೆ.
- g ಧರ್ಮೋ 19:15:
- h ಕೆಲವು ಪ್ರತಿಗಳಲ್ಲಿ, ಭ್ರಷ್ಟನಂತೆಯೂ ಎಂದು ಬರೆದದೆ.
- i ಮತ್ತಾ 7:7, 11; ಯೋಹಾ 15:7; 16:23:
- j ಮೂಲ 10,000 ತಲಾಂತು; ತಲಾಂತು ಅಂದರೆ ಸುಮಾರು 3,000 ರೂಪಾಯಿ.
- k ಮತ್ತಾ 6:14, 15; ಯಾಕೋಬ 2:13: