7 ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು, 8 “ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು.
9 ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು. 10 ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು. 11 ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ [c]ಅದಕ್ಕೆ ಚಿನ್ನ, ಪರಿಮಳದ್ರವ್ಯ[d] ಮತ್ತು ರಕ್ತಬೋಳಗಳನ್ನು[e] ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು. 12 ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
16 ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು. 17 ಯೆರೆಮೀಯನೆಂಬ ಪ್ರವಾದಿಯು ಹೇಳಿದ ಮಾತು ಹೀಗೆ ನೆರವೇರಿತು; ಅದೇನೆಂದರೆ,
19 ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, 20 “ನೀನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹೋಗು; ಕೂಸಿನ ಪ್ರಾಣವನ್ನು ತೆಗೆಯಬೇಕೆಂದಿದ್ದವರು ಸತ್ತು ಹೋದರು” ಎಂದು ಹೇಳಿದನು. 21 ಆಗ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು. 22 ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು. 23 ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.
<- ಮತ್ತಾಯನು 1ಮತ್ತಾಯನು 3 ->