1“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು*ದೀವಟಿಗೆಗಳನ್ನುತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.2ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.3ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.4ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.5ಮದಲಿಂಗನು ಬರುವುದಕ್ಕೆ ತಡಮಾಡಲು ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.6ಆದರೆ ಅರ್ಧರಾತ್ರಿಯಲ್ಲಿ, ‘ಇಗೋ, ಮದಲಿಂಗನು ಬರುತ್ತಿದ್ದಾನೆ ಅವನನ್ನು ಎದುರುಗೊಳ್ಳಲು ಹೊರಡಿರಿ’ ಎಂಬ ಕೂಗು ಕೇಳಿಸಿತು.7ಆಗ ಆ ಕನ್ನಿಕೆಯರೆಲ್ಲರು ಎಚ್ಚೆತ್ತು ತಮ್ಮ ದೀಪಾರತಿಗಳನ್ನು ಸರಿಮಾಡಿಕೊಂಡರು.8ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.9ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ’ ಎಂದು ಕೇಳಿದರು. ಅದಕ್ಕೆ ಆ ಬುದ್ಧಿವಂತರಾದ ಕನ್ನಿಕೆಯರು, ಆಗುವುದಿಲ್ಲ ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು’ ಅಂದರು.10ಅವರು ಕೊಂಡುಕೊಳ್ಳುವುದಕ್ಕೆ ಹೊರಟುಹೋದಾಗ ಮದಲಿಂಗನು ಬಂದನು. ಸಿದ್ಧವಾಗಿದ್ದವರು ಅವನ ಸಂಗಡ ಮದುವೆಯ ಮನೆಯೊಳಗೆ ಹೋದರು, ಬಾಗಿಲನ್ನು ಮುಚ್ಚಲಾಯಿತು.11ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.12ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.13†ಮತ್ತಾ 24:42ಏಕೆಂದರೆ ಆ ದಿನವಾದರೂ ಗಳಿಗೆಯಾದರೂ ನಿಮಗೆ ತಿಳಿಯದು, ಆದಕಾರಣ ಎಚ್ಚರವಾಗಿರಿ.
ತಲಾಂತುಗಳ ಸಾಮ್ಯ
14“ದೇವರ ರಾಜ್ಯವು ಹೇಗೆಂದರೆ‡ಲೂಕ 9:12-27ದೇಶಾಂತರಕ್ಕೆ ಹೊರಟ್ಟಿದ್ದ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿಕೊಟ್ಟಂತಿರುವುದು.15ಅವನು ಒಬ್ಬನಿಗೆ ಐದು§3,000 ರೂಪಾಯಿತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.16ತಕ್ಷಣವೇ ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.17ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.18ಆದರೆ ಒಂದು ತಲಾಂತು ಹೊಂದಿದವನು ಹೋಗಿ ಭೂಮಿಯನ್ನು ಅಗೆದು ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.19ಬಹುಕಾಲದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ತೆಗೆದುಕೊಳ್ಳಲು20ಐದು ತಲಾಂತುಗಳು ಹೊಂದಿದವನು ಮುಂದೆ ಬಂದು ಇನ್ನೂ ಐದು ತಲಾಂತುಗಳನ್ನು ತಂದು, ‘ಯಜಮಾನನೇ, ನೀನು ಐದು ತಲಾಂತಗಳನ್ನು ನನಗೆ ಕೊಟ್ಟಿದ್ದೆಯಲ್ಲಾ, ಇಗೋ, ಇನ್ನು ಐದು ತಲಾಂತು ಸಂಪಾದಿಸಿದ್ದೇನೆ’ ಅಂದನು.21ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.22ಆಗ ಎರಡು ತಲಾಂತು ಹೊಂದಿದವನು ಮುಂದೆ ಬಂದು, ‘ಯಜಮಾನನೇ, ನೀನು ಎರಡು ತಲಾಂತನ್ನು ನನಗೆ ಒಪ್ಪಿಸಿದ್ದೆಯಲ್ಲಾ; ಇಗೋ, ಇನ್ನು ಎರಡು ತಲಾಂತು ಸಂಪಾದಿಸಿದ್ದೇನೆ’ ಅಂದನು.23ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಎಂದು ಹೇಳಿದನು.24ತರುವಾಯ ಒಂದು ತಲಾಂತು ಹೊಂದಿದವನು ಸಹ ಮುಂದೆಬಂದು, ‘ಯಜಮಾನನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನು, ನೀನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಆಗಿರುವ ಕಠಿಣ ಮನುಷ್ಯನು ಎಂದು ನಾನು ತಿಳಿದು25ಹೆದರಿ, ಹೊರಟುಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು; ಇಗೋ, ನಿನ್ನದು ನಿನಗೇ ಸಲ್ಲಿಸುತ್ತಿದ್ದೇನೆ’ ಅಂದನು.26ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?27ಹಾಗಾದರೆ, ನೀನು ನನ್ನ ಹಣವನ್ನು ಸಾಹುಕಾರರಲ್ಲಿ ಬಡ್ಡಿಗೆ ಹಾಕಬೇಕಾಗಿತ್ತು; ನಾನು ಬಂದು ನನ್ನದನ್ನು ಬಡ್ಡಿ ಸಹಿತ ಪಡೆದುಕೊಳ್ಳುತ್ತಿದ್ದೆನು ಎಂದು ಹೇಳಿ,28ಅವನಿಂದ ಆ ತಲಾಂತನ್ನು ತೆಗೆದು ಹತ್ತು ತಲಾಂತು ಇರುವ ಸೇವಕನಿಗೆ ಕೊಟ್ಟನು.29ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲ್ಪಡುವುದು, ಅವರಿಗೆ ಇನ್ನೂ ಹೆಚ್ಚಾಗುವುದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.30ಮತ್ತು ನಿಷ್ಪ್ರಯೋಜಕನಾದ ಈ ಸೇವಕನನ್ನು ಹೊರಗೆ ಕಗ್ಗತ್ತಲೆಗೆ ಹಾಕಿಬಿಡಿರಿ ಎಂದು ಅಪ್ಪಣೆಕೊಟ್ಟನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು.’
31*ಯೋವೇ. 3:12“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;32ಆಗ ಎಲ್ಲಾ ದೇಶಗಳ ಜನರನ್ನೂ ಆತನ ಸಮ್ಮುಖದಲ್ಲಿ ತಂದು ಸೇರಿಸುವರು. ಕುರುಬನು ಕುರಿಗಳನ್ನೂ, ಆಡುಗಳನ್ನೂ ಬೇರ್ಪಡಿಸುವ ಪ್ರಕಾರ ಆತನು ಅವರನ್ನು ಬೇರ್ಪಡಿಸುವನು.33ಕುರಿಗಳನ್ನು ತನ್ನ ಬಲಗಡೆಯಲ್ಲಿ ಮತ್ತು ಆಡುಗಳನ್ನು ಎಡಗಡೆಯಲ್ಲಿ ನಿಲ್ಲಿಸುವನು.34ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.35ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;36ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. 37ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು?38ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು?39ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು.40ಅದಕ್ಕೆ ಉತ್ತರವಾಗಿ ಅರಸನು,†ಮತ್ತಾ 10:42‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.41ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.42ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.43ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಡಲಿಲ್ಲ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡುವುದಕ್ಕೆ ಕೊಡಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಆರೈಕೆಮಾಡುವುದಕ್ಕೆ ಬರಲಿಲ್ಲವೆಂದು’ ಹೇಳುವನು.44ಅದಕ್ಕೆ ಉತ್ತರವಾಗಿ ಅವರೂ ಸಹ, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನೂ, ನೀನು ಬಾಯಾರಿದ್ದನ್ನೂ, ನೀನು ಪರದೇಶಿಯಾಗಿದ್ದನ್ನೂ, ಬಟ್ಟೆಯಿಲ್ಲದವನಾಗಿದ್ದನ್ನೂ, ಅಸ್ವಸ್ಥನಾಗಿದ್ದುದನ್ನೂ, ಸೆರೆಮನೆಯಲ್ಲಿದ್ದುದನ್ನೂ ಕಂಡು ನಿನಗೆ ಉಪಚಾರಮಾಡದೆ ಹೋದೆವು?’ ಅನ್ನುವರು.45ಆಗ ಆತನು ಉತ್ತರವಾಗಿ ಅವರಿಗೆ, ‘ನೀವು ಈ ಕೇವಲ ಅಲ್ಪರಾದವರಲ್ಲಿ ಒಬ್ಬನಿಗೆ ಏನನ್ನು ಮಾಡದೆ ಹೋದಿರೋ ಅದನ್ನು ನನಗೂ ಮಾಡದೆ ಹೋದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.46ಮತ್ತು ಅನೀತಿವಂತರಾದ ಇವರು‡ದಾನಿ. 12:2; ಯೋಹಾ 5:29ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.