3 “ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ? 4 ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ. 5 ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.
6 “ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.
9 “ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ? 10 ಮೀನು ಕೇಳಿದರೆ ಹಾವನ್ನು ಕೊಡುವನೋ? 11 ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ? 12 ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
28 “ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು. 29 ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು.
<- ಮತ್ತಾಯನು 6ಮತ್ತಾಯನು 8 ->