3 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು. 4 ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ,
16 ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು. 17 ಕಾನಾನ್ ದೇಶದಲ್ಲಿ ಸಂಚರಿಸಿ ನೋಡುವುದಕ್ಕೆ ಮೋಶೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯದ ಮಾರ್ಗವಾಗಿ ಬೆಟ್ಟದ ಸೀಮೆಗೆ ಹತ್ತಿಹೋಗಿ ಆ ದೇಶದ ಸಂಗತಿಯನ್ನೆಲ್ಲಾ ನೋಡಿ ತಿಳಿದುಕೊಳ್ಳಬೇಕು. 18 ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ, 19 ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ? 20 ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.
21 ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು. 22 ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು. 23 ಅವರು ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಾಲತೆಯಿಂದ ಒಂದೇ ಗೊಂಚಲುಳ್ಳ ಕೊಂಬೆಯನ್ನು ಕೊಯ್ದರು; ಇಬ್ಬರು ಅದನ್ನು ಅಡ್ಡಕೋಲಿನಿಂದ ಹೊತ್ತುಕೊಂಡು ಬಂದರು. ಕೆಲವು ದಾಳಿಂಬೆ ಮತ್ತು ಅಂಜೂರದ ಹಣ್ಣುಗಳನ್ನೂ ತಂದರು. 24 ಇಸ್ರಾಯೇಲರು ಅಲ್ಲಿ ಆ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದಲೇ ಆ ಸ್ಥಳಕ್ಕೆ “*ದ್ರಾಕ್ಷಿಯ ಗೊಂಚಲು.ಎಷ್ಕೋಲ್” ಎಂದು ಹೆಸರು ಉಂಟಾಯಿತು.
30 ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು. 31 ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು.
32 ಅದಲ್ಲದೆ ಇವರು ತಾವು ಸಂಚರಿಸಿ ನೋಡಿದ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿದ ದೇಶವು ತನ್ನಲ್ಲಿ ವಾಸಿಸುವವರನ್ನು ನುಂಗಿಬಿಡುತ್ತದೆ. ಅದಲ್ಲದೆ ನಾವು ಅದರಲ್ಲಿ ನೋಡಿದ ಜನರೆಲ್ಲರೂ ಬಹಳ ಎತ್ತರವಾದವರು. 33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ‡ನೆಫೀಲಿಯ ರಾಕ್ಷಸಾಕಾರದವರು. ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.
<- ಅರಣ್ಯಕಾಂಡ 12ಅರಣ್ಯಕಾಂಡ 14 ->