6 ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು. 7 ಮೋಶೆ ಆ ಕೋಲುಗಳನ್ನು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇಟ್ಟನು. 8 ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು! 9 ಮೋಶೆ ಆ ಕೋಲುಗಳನ್ನೆಲ್ಲಾ ಯೆಹೋವನ ಸನ್ನಿಧಿಯಿಂದ ಇಸ್ರಾಯೇಲರ ಬಳಿಗೆ ತಂದು ತೋರಿಸಿದನು. ಅವರು ನೋಡಿ ತಮ್ಮತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.
10 ತರುವಾಯ ಯೆಹೋವನು ಮೋಶೆಗೆ, “ಆರೋನನ ಕೋಲನ್ನು ತಿರುಗಿ ಆಜ್ಞಾಶಾಸನಗಳ ಮುಂದೆ ಇಡಬೇಕು. ಅದು ತಿರುಗಿಬೀಳುವವರಿಗೆ ದೃಷ್ಟಾಂತವಾಗಿ ಅಲ್ಲೇ ಇರಬೇಕು. ಇವರು ಇನ್ನು ಮುಂದೆ ನನಗೆ ವಿರುದ್ಧವಾಗಿ ಗುಣುಗುಟ್ಟಿ ನಾಶವಾಗದಂತೆ ನೀನು ಹೀಗೆ ಮಾಡು” ಎಂದು ಆಜ್ಞಾಪಿಸಿದನು. 11 ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.
12 ಇಸ್ರಾಯೇಲರು ಮೋಶೆಯ ಬಳಿಗೆ ಬಂದು ಅವನಿಗೆ, “ನಾವು ಇಲ್ಲಿ ಸಾಯುತ್ತೇವೆ; ಇಲ್ಲವೇ ನಾಶವಾಗಿ ಹೋಗುತ್ತೇವೆ. 13 ಯೆಹೋವನ ಗುಡಾರದ ಹತ್ತಿರಕ್ಕೆ ಬರುವವರೆಲ್ಲರೂ ಸಾಯುತ್ತಾರಷ್ಟೆ; ನಾವೆಲ್ಲರೂ ಹಾಗೆಯೇ ಸಾಯಬೇಕೇನು?” ಎಂದು ಕೇಳಿದರು.
<- ಅರಣ್ಯಕಾಂಡ 16ಅರಣ್ಯಕಾಂಡ 18 ->- a ಮಂಜೂಷದ ಪೆಟ್ಟಿಗೆ, ವಿಮೋ 25:22; 32:15.