2 ಸಮೂಹದವರಿಗೆ ನೀರು ಇಲ್ಲದ ಕಾರಣ ಅವರು ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಕೂಡಿಕೊಂಡರು. 3 ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು. 4 ನೀವು ಯೆಹೋವನ ಸಮೂಹದವರಾದ ನಮ್ಮನ್ನೂ, ನಮ್ಮ ಪಶುಗಳನ್ನೂ ಈ ಮರಳುಗಾಡಿಗೆ ಕರೆದುಕೊಂಡು ಬಂದು ಯಾಕೆ ಸಾಯಿಸುತ್ತೀರಿ? 5 ನಮ್ಮನ್ನು ಐಗುಪ್ತ ದೇಶದಿಂದ ಬರಮಾಡಿ ಈ ಕೆಟ್ಟ ಸ್ಥಳಕ್ಕೆ ಯಾಕೆ ಕರೆದುಕೊಂಡು ಬಂದಿದ್ದೀರಿ? ಈ ನೆಲದಲ್ಲಿ ಧಾನ್ಯವೂ, ಅಂಜೂರವೂ, ದ್ರಾಕ್ಷಿಯೂ, ದಾಳಿಂಬೆಯೂ ಮತ್ತು ಕುಡಿಯುವುದಕ್ಕೆ ನೀರೂ ಸಹ ಸಿಕ್ಕುವುದಿಲ್ಲ” ಎಂದು ಹೇಳುತ್ತಿದ್ದರು.
6 ಮೋಶೆ ಮತ್ತು ಆರೋನರು ಜನಸಮೂಹದ ಎದುರಿನಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಹೋಗಿ ಬೋರಲುಬಿದ್ದಾಗ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು. 7 ಆಗ ಯೆಹೋವನು ಮೋಶೆ ಸಂಗಡ ಮಾತನಾಡಿ, 8 “ನೀನು ಕೋಲನ್ನು ಕೈಯಲ್ಲಿ ಹಿಡಿದು ನಿನ್ನ ಅಣ್ಣನಾದ ಆರೋನನ ಜೊತೆಯಲ್ಲಿ ಸಮೂಹದವರನ್ನು ಕೂಡಿಸಿಕೊಂಡು ಅವರ ಎದುರಿನಲ್ಲೇ ಆ ಕಡಿದಾದ ಬಂಡೆಗೆ ನೀರುಕೊಡಬೇಕೆಂದು ಆಜ್ಞಾಪಿಸು. ಅದರೊಳಗಿಂದ ನೀರು ಹೊರಟುಬರುವುದು, ನೀನು ಸಮೂಹದವರಿಗೂ, ಅವರ ಪಶುಗಳಿಗೂ ನೀರನ್ನು ಕುಡಿಯುವುದಕ್ಕೆ ಕೊಡಬಹುದು” ಎಂದು ಹೇಳಿದನು.
9 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡನು. 10 ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?” 11 ಆಗ ಮೋಶೆ ತನ್ನ ಕೈಯನ್ನು ಮೇಲಕ್ಕೆ ಎತ್ತಿ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ನೀರು ಪ್ರವಾಹವಾಗಿ ಹೊರಟಿತು. ಸಮೂಹದವರೂ ಮತ್ತು ಅವರ ಪಶುಗಳೂ ನೀರು ಕುಡಿದರು.
12 ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
13 ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “[a]ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು.
18 ಆದರೆ ಎದೋಮ್ಯರು, “ನಮ್ಮ ದೇಶವನ್ನು ನೀವು ದಾಟಿ ಹೋಗಬಾರದು. ದಾಟುವುದಾದರೆ ನಾವು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತೇವೆ” ಎಂದು ಉತ್ತರಕೊಟ್ಟರು.
19 ಅದಕ್ಕೆ ಇಸ್ರಾಯೇಲರು, “ನಾವು ರಾಜಮಾರ್ಗದಲ್ಲಿಯೇ ಹೋಗುವೆವು. ನಾವೂ ಮತ್ತು ನಮ್ಮ ಪಶುಗಳೂ ನಿಮ್ಮ ನೀರನ್ನು ಕುಡಿದರೆ ಅದರ ಬೆಲೆ ಕೊಡುವೆವು. ಬೇರೆ ಏನನ್ನು ಮಾಡದೆ, ಕಾಲ್ನಡೆಯಾಗಿ ದಾಟಿಹೋಗುವುದಕಷ್ಟೇ ನಮಗೆ ಅಪ್ಪಣೆಯಾಗಬೇಕು” ಎಂದು ಹೇಳಿದರು.
20 ಆದರೆ ಎದೋಮ್ಯರು, “ನೀವು ದಾಟಲೇ ಬಾರದು” ಎಂದು ಉತ್ತರಕೊಟ್ಟು ಬಹುಜನರನ್ನು ಕೂಡಿಸಿಕೊಂಡು ಇಸ್ರಾಯೇಲರಿಗೆ ಎದುರಾಗಿ ಯುದ್ಧಕ್ಕೆ ಬಂದರು. 21 ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು.
27 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಹೀಗೆ ಮಾಡಿದನು. ಸರ್ವಸಮೂಹದವರು ನೋಡುತ್ತಿರಲಾಗಿ ಅವರು ಹೋರ್ ಬೆಟ್ಟವನ್ನು ಹತ್ತಿದರು. 28 ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು. 29 ಆರೋನನು ಸತ್ತುಹೋದ ಸಂಗತಿಯನ್ನು ಇಸ್ರಾಯೇಲ್ ಸಮೂಹದವರು ಕೇಳಿ ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.
<- ಅರಣ್ಯಕಾಂಡ 19ಅರಣ್ಯಕಾಂಡ 21 ->- a ಜಗಳ ಅಥವಾ ವಾಗ್ವಾದ.