8 “ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು. 9 ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು. 10 ಪ್ರತಿ ಮನುಷ್ಯನು ಯೆಹೋವನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದು ಒಪ್ಪಿಸುತ್ತಾನೋ ಅದು ಆ ಯಾಜಕನದ್ದಾಗಿರುತ್ತದೆ.”
16 “ ‘ಯಾಜಕನು ಅವಳನ್ನು ಕರೆದು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಬೇಕು. 17 ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು. 18 ಯಾಜಕನು ಆ ಸ್ತ್ರೀಯನ್ನು ಯೆಹೋವನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಯ ಮೇಲಿರುವ ಮುಸುಕನ್ನು ತೆಗೆದು, ಕೂದಲನ್ನು ಕೆದರಿಸಿ ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿ ಇಟ್ಟು, ಶಾಪವನ್ನುಂಟುಮಾಡುವ ವಿಷಕರವಾದ ಆ ನೀರನ್ನು ಯಾಜಕನು ತನ್ನ ಕೈಯಲ್ಲಿ ಹಿಡಿದುಕೊಳ್ಳಬೇಕು. 19 ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ. 20 ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಪರಪುರುಷನೊಡನೆ ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನೊಡನೆ ನೀನು ಸಂಗಮಿಸಿದ್ದರೆ,” 21 “ಯೆಹೋವನು ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ, ನಿನ್ನ [a]ಹೊಟ್ಟೆಯು ಉಬ್ಬುವಂತೆ ಮಾಡಿ ನಿನ್ನನ್ನು ನಿನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳನ್ನಾಗಿ ನೇಮಿಸಲಿ. 22 ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು.
23 “ ‘ಇದಲ್ಲದೆ ಯಾಜಕನು ಈ ಶಾಪವಚನಗಳನ್ನು ಸುರುಳಿಯಲ್ಲಿ ಬರೆದು, ವಿಷಕರ ಜಲದಲ್ಲಿ ಆ ಶಾಪವಚನವನ್ನು ತೊಳೆಯಬೇಕು. 24 ಶಾಪವನ್ನುಂಟುಮಾಡುವ ವಿಷಕರವಾದ ನೀರನ್ನು ಆ ಸ್ತ್ರೀಗೆ ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ವಿಷಕರವಾಗುವುದು. 25 ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು. 26 ಆಗ ಯಾಜಕನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಕಾಣಿಕೆಯಿಂದ ಒಂದು ಹಿಡಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಆ ನೀರನ್ನು ಸ್ತ್ರೀಗೆ ಕುಡಿಸಬೇಕು. 27 ಅವಳು ಅಶುದ್ಧಳಾಗಿ ಗಂಡನಿಗೆ ದ್ರೋಹಮಾಡಿದವಳಾಗಿದ್ದರೆ ಆ ನೀರನ್ನು ಕುಡಿದ ನಂತರ ಆ ನೀರು ಅವಳೊಳಗೆ ಸೇರಿ ವಿಷವಾಗುವುದರಿಂದ ಅವಳ ಹೊಟ್ಟೆ ಉಬ್ಬುವುದು, ಅವಳ ತೊಡೆಗಳು ಕ್ಷೀಣವಾಗಿ ಹೋಗುವವು. ಆಗ ಆ ಸ್ತ್ರೀಯು ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗುವಳು. 28 ಆದರೆ ಆ ಸ್ತ್ರೀಯು ಪರಿಶುದ್ಧಳಾಗಿ ನಿರಪರಾಧಿಯಾದ ಪಕ್ಷಕ್ಕೆ ಯಾವ ಹಾನಿಯನ್ನು ಅನುಭವಿಸದೆ ಸಂತಾನವನ್ನು ಪಡೆಯುವಳು. 29 ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾದರೆ ಇಂತಹ ವ್ಯಭಿಚಾರದ ಸಂಶಯವನ್ನು ಪರಿಹರಿಸುವ ನಿಯಮ ಇದೇ. 30 ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯ ಪಟ್ಟರೆ [b]ಅವನು ಅವಳನ್ನು ಯೆಹೋವನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿನಿಯಮವನ್ನು ನೆರವೇರಿಸಬೇಕು. 31 ಆಗ ಗಂಡನು ನಿರಪರಾಧಿಯಾಗುವನು. ಆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ”
<- ಅರಣ್ಯಕಾಂಡ 4ಅರಣ್ಯಕಾಂಡ 6 ->