20
ಅರಸನ ಜಯಕ್ಕಾಗಿ ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
1 ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ;
ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ.
2 ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ;
ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ.
3 ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ;
ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ.
ಸೆಲಾ
4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ;
ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.
5 ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು;
ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು.
ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.
6 ಯೆಹೋವನು ತಾನು ಅಭಿಷೇಕಿಸಿದ ಅರಸನಿಗೆ
ಜಯವನ್ನು ಅನುಗ್ರಹಿಸುವನೆಂದು ಈಗ ನನಗೆ ಗೊತ್ತಾಯಿತು.
ಆತನು ತನ್ನ ಪವಿತ್ರ ಲೋಕದಿಂದ ಅವನ ಪ್ರಾರ್ಥನೆಗೆ ಸದುತ್ತರವನ್ನು ಕೊಡುವನು,
ತನ್ನ ಭುಜಬಲದಿಂದ ಅವನಿಗೆ ವಿಜಯವನ್ನು ಉಂಟುಮಾಡುವನು.
7 ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ;
ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
8 ಅವರು ಬಿದ್ದುಹೋಗಿದ್ದಾರೆ;
ನಾವಾದರೋ ಎದ್ದು ನಿಂತಿದ್ದೇವೆ.
9 ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು;