8
ದೇವರು ಅನುಗ್ರಹಿಸಿರುವ ಗೌರವಕ್ಕಾಗಿ ಆತನನ್ನು ಕೊಂಡಾಡುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು.
1 ನಮ್ಮ ಕರ್ತನಾದ ಯೆಹೋವನೇ, ನಿನ್ನ ನಾಮವು ಭೂಲೋಕದಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದು.
ಆಕಾಶಮಂಡಲದಲ್ಲಿ ನಿನ್ನ ವೈಭವವನ್ನು ಪ್ರಕಾಶಪಡಿಸಿದ್ದೀ.
2 ನಿನಗೆ ವಿರುದ್ಧವಾಗಿ ನಿಂತು ಮುಯ್ಯಿತೀರಿಸುವ
ವೈರಿಗಳ ಬಾಯನ್ನು ಕಟ್ಟುವುದಕ್ಕೋಸ್ಕರ,
ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ
ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.
3 ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ,
ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,
4 ಮನುಷ್ಯನು ಎಷ್ಟು ಮಾತ್ರದವನು,
ಅವನನ್ನು ನೀನು ಏಕೆ ಸ್ಮರಿಸಬೇಕು?
ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
5 ಅವನನ್ನು ದೇವರಿಗಿಂತ*ದೇವರಿಗಿಂತ ಅಥವಾ ದೇವದೂತರಿಗಿಂತ. ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ;
ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
6 ನೀನು ಸೃಷ್ಟಿಸಿದ ಎಲ್ಲಾ ವಸ್ತುಗಳ ಮೇಲೆ
†ಇಬ್ರಿಯ 2:6-9 ಅನ್ನು ನೋಡಿರಿ.ಪ್ರಭುತ್ವವನ್ನು ಅವನಿಗೆ ಅನುಗ್ರಹಿಸಿದಿ.
7 ನೀನು ಎಲ್ಲಾ ಕುರಿ, ದನಗಳನ್ನು ಮಾತ್ರವೇ ಅಲ್ಲದೆ ಕಾಡುಮೃಗಗಳು,
8 ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು,
ಅದರಲ್ಲಿ ಸಂಚರಿಸುವ ಸಕಲವಿಧವಾದ ಜೀವಜಂತುಗಳು,
ಇವೆಲ್ಲವನ್ನೂ ಅವನಿಗೆ ಅಧೀನಮಾಡಿದ್ದೀಯಲ್ಲವೇ.
9 ನಮ್ಮ ಕರ್ತನಾದ ಯೆಹೋವನೇ,