Link to home pageLanguagesLink to all Bible versions on this site
16
ದೇವರ ಕೋಪದ ಬಟ್ಟಲುಗಳು
1 ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು [a]ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ [b]ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ [c]ಸುರಿಯಿರಿ” ಎಂದು ಹೇಳಿತು.

2 ಆಗ ಮೊದಲನೆಯ ದೇವದೂತನು ಹೋಗಿ ತನ್ನ ಬಟ್ಟಲಲ್ಲಿ ಇದ್ದದ್ದನ್ನು ಭೂಮಿಯ ಮೇಲೆ ಸುರಿಯಲು [d]ಮೃಗದ ಗುರುತನ್ನು ಹಾಕಿಸಿಕೊಂಡವರು, ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ [e]ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.

3 ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ [f]ರಕ್ತದ ಹಾಗಾಯಿತು ಮತ್ತು [g]ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.

4 ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು [h]ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ [i]ಅವುಗಳ ನೀರು ರಕ್ತವಾಯಿತು.

5 ಆ ಮೇಲೆ ಜಲಾಧಿಪತಿಯಾದ ದೂತನು, “ನೀನು [j]ಇರುವಾತನೂ [k] ಇದ್ದಾತನೂ [l]ಪರಿಶುದ್ಧನಾಗಿರುವಾತನು ಆಗಿರುವ ದೇವರು, ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ. 6 ಅವರು [m]ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು [n]ಸುರಿಸಿದ್ದರಿಂದ, [o]ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು. 7 ಆ ಮೇಲೆ [p]ಯಜ್ಞವೇದಿಯು ಮಾತನಾಡುತ್ತಾ, “ದೇವರಾದ ಕರ್ತನೇ ಸರ್ವಶಕ್ತನೇ, [q]ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ” ಎಂದು ಹೇಳುವುದನ್ನು ಕೇಳಿದೆನು.

8 ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು. 9 ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು [r]ದೂಷಿಸಿದಲ್ಲದೆ, ಅವರು [s]ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.

10 ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ [t]ಸಿಂಹಾಸನದ ಮೇಲೆ ಸುರಿಯಲು [u]ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು, 11 ತಮ್ಮ ಯಾತನೆಗಳಿಗಾಗಿಯೂ [v]ಹುಣ್ಣುಗಳ ದೆಸೆಯಿಂದಲೂ [w]ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಮಾನಸಾಂತರ ಹೊಂದಲಿಲ್ಲ.

12 ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು [x]ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, [y]ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ [z]ಅದರ ನೀರು ಬತ್ತಿಹೋಯಿತು. 13 ಆಗ [aa]ಘಟಸರ್ಪದ ಬಾಯಿಂದ, [bb]ಮೃಗದ ಬಾಯಿಂದ ಮತ್ತು [cc]ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು. 14 ಇವು [dd]ಸೂಚಕಕಾರ್ಯಗಳನ್ನು ಮಾಡುವ ಭೂತಾತ್ಮಗಳಾಗಿದ್ದು ಭೂಲೋಕದ ಎಲ್ಲಾ ರಾಜರುಗಳ ಬಳಿಗೆ ಹೋಗಿ ಸರ್ವಶಕ್ತನಾದ [ee]ದೇವರ ಮಹಾದಿನದ [ff]ಯುದ್ಧಕ್ಕಾಗಿ ಅವರನ್ನು ಕೂಡಿಸುತ್ತಿದ್ದವು. 15 “ಇಗೋ[gg]ಕಳ್ಳನು ಬರುವಂತೆ ಬರುತ್ತೇನೆ.[hh]ತಾನು[ii]ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ[jj]ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”

16 ಆಗ [kk]ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ [ll]ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.

17 ಏಳನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ವಾಯುಮಂಡಲದ ಮೇಲೆ ಸುರಿಯಲು ಆಗ ಆಲಯದ ಸಿಂಹಾಸನದಿಂದ ಮಹಾಧ್ವನಿಯು ಉಂಟಾಗಿ “ಸಂಭವಿಸಿ [mm]ಆಯಿತು” ಎಂದು ಹೇಳಿತು. 18 ಆಗ [nn]ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ [oo]ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ. 19 [pp]ಮಹಾ ಪಟ್ಟಣವು [qq]ಮೂರು ಭಾಗವಾಗಿ ಬಿರಿಯಿತು ಮತ್ತು ಜನಾಂಗಗಳ ಪಟ್ಟಣಗಳು ಬಿದ್ದವು. ಆಗ ದೇವರು ತನ್ನ ಸನ್ನಿಧಿಯಲ್ಲಿ [rr]ಬಾಬೆಲನ್ನು [ss]ಜ್ಞಾಪಿಸಿಕೊಂಡು [tt]ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದಿಂದ ತುಂಬಿದ ಪಾತ್ರೆಯನ್ನು ಆ ನಗರಕ್ಕೆ ಕೊಟ್ಟನು. 20 ಆಗ ಪ್ರತಿಯೊಂದು [uu]ದ್ವೀಪವು ಓಡಿಹೋಗಿ ಮರೆಯಾದವು ಬೆಟ್ಟಗಳು ಕಾಣದಂತಾದವು. 21 ಮತ್ತು ಆಕಾಶದಿಂದ ಮನುಷ್ಯರ ಮೇಲೆ [vv]ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು [ww]ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು [xx]ದೇವರನ್ನು ದೂಷಿಸಿದರು.

<- ಪ್ರಕಟಣೆ 15ಪ್ರಕಟಣೆ 17 ->