Link to home pageLanguagesLink to all Bible versions on this site
2
ಎಫೆಸ ಸಭೆಗೆ ಸಂದೇಶ
1 “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ,[a]ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು[b]ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,

2 [c]“ನಿನ್ನ ಕೃತ್ಯಗಳನ್ನೂ, ಪ್ರಯಾಸವನ್ನೂ, ತಾಳ್ಮೆಯನ್ನೂ, ಬಲ್ಲೆನು. ನೀನು ದುರ್ಜನರನ್ನು ಸಹಿಸಲಾರೆ, ಅಪೊಸ್ತಲರಲ್ಲದಿದ್ದರೂ[d]ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು[e]ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ. 3 ನೀನು ತಾಳ್ಮೆಯುಳ್ಳವನಾಗಿ[f]ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡರೂ ಬಿದ್ದುಹೋಗದೆ ಇದ್ದುದನ್ನು ನಾನು ಬಲ್ಲೆನು. 4 ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ.[g]ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ. 5 ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ[h]ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ[i]ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು. 6 ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ[j]ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ. 7 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು[k]ಕಿವಿಯುಳ್ಳವನು ಕೇಳಲಿ.[l]ಯಾವನು ಜಯಹೊಂದುತ್ತಾನೋ ಅವನಿಗೆ[m]ದೇವರ ಪರದೈಸಿನಲ್ಲಿರುವ[n]ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವುದಕ್ಕೆ ಅನುಮತಿ ಕೊಡುವೆನು.

ಸ್ಮುರ್ನದ ಸಭೆಗೆ ಸಂದೇಶ
8 “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು,[o]ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ[p]ಹೇಳುವುದೇನಂದರೆ, 9 ನಾನು ನಿನ್ನ ಸಂಕಟವನ್ನೂ[q]ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ[r]ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ[s]ಸಭಾಮಂದಿರದವರಾಗಿದ್ದಾರೆ. 10 ನಿನಗೆ ಸಂಭವಿಸಬಹುದಾದ ಬಾಧೆಗಳಿಗೆ ಹೆದರಬೇಡ. ಇಗೋ,[t]ನಿಮ್ಮನ್ನು ಪರೀಕ್ಷಿಸಲು ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕಿದ್ದಾನೆ ಮತ್ತು[u]ಹತ್ತು ದಿನಗಳ ತನಕ ನಿಮಗೆ ಸಂಕಟವಿರುವುದು.[v]ನೀನು ಸಾಯುವ ತನಕ[w]ನಂಬಿಗಸ್ತನಾಗಿರು, ನಾನು ನಿನಗೆ[x]ಜೀವದ ಕಿರೀಟವನ್ನು ಕೊಡುವೆನು. 11 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು[y]ಕಿವಿಯುಳ್ಳವನು ಕೇಳಲಿ.[z]ಜಯಹೊಂದುವವನಿಗೆ[aa]ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
ಪೆರ್ಗಮದ ಸಭೆಗೆ ಸಂದೇಶ
12 “ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ,[bb]ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ, 13 ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.[cc]ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ. 14 ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.[dd]ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ[ee]ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು[ff]ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ. 15 ಹಾಗೆಯೇ,[gg]ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿಮ್ಮಲ್ಲಿದ್ದಾರೆ. 16 ಆದ್ದರಿಂದ ನೀನು ಪಶ್ಚಾತ್ತಾಪಪಟ್ಟು ತಿರುಗಿಕೊಳ್ಳದಿದ್ದರೆ[hh]ನಾನು ಬೇಗನೆ ನಿನ್ನ ಬಳಿಗೆ ಬಂದು[ii]ನನ್ನ ಬಾಯಿಂದ ಹೊರಬರುವ ಕತ್ತಿಯಿಂದ[jj]ಅವರ ಮೇಲೆ ಯುದ್ಧ ಮಾಡುವೆನು. 17 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.[kk]ಯಾವನು ಜಯಹೊಂದುತ್ತಾನೋ ಅವನಿಗೆ[ll]ಬಚ್ಚಿಟ್ಟಿರುವ[mm]ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ[nn]ಹೊಸ ಹೆಸರನ್ನೂ ಕೊಡುವೆನು.[oo]ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.
ಥುವತೈರದ ಸಭೆಗೆ ಸಂದೇಶ
18 “ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ,[pp]ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ, 19 [qq]ನಿನ್ನ ಕೃತ್ಯಗಳನ್ನೂ, ನಿನ್ನ ಪ್ರೀತಿಯನ್ನೂ, ನಂಬಿಕೆಯನ್ನೂ, ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ಇದಲ್ಲದೆ ನಿನ್ನ ಇತ್ತೀಚಿನ ಕೃತ್ಯಗಳು ನಿನ್ನ ಮೊದಲಿನ ಕೃತ್ಯಗಳಿಗಿಂತ ಮೇಲಾದದ್ದು ಎಂದು ಬಲ್ಲೆನು. 20 ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.[rr]ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು,[ss]ಜಾರತ್ವಮಾಡಬಹುದೆಂದೂ[tt]ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ. 21 ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,[uu]ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ. 22 ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು. 23 [vv]ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ[ww]ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.[xx]ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.

24 “ಆದರೆ ಥುವತೈರದಲ್ಲಿರುವ ಉಳಿದವರಿಗೆ, ಅಂದರೆ ಸೈತಾನನಿಂದ ಪ್ರೇರಿತವಾದ ದುರ್ಬೋಧನೆಯ ಆಳವನ್ನು ಯಾರಾರು ತಿಳಿಯದೆಯೂ ಅದನ್ನು ಅವಲಂಬಿಸದೆಯೂ ಇರುತ್ತಾರೋ ಅವರಿಗೆ ಹೇಳುವುದೇನಂದರೆ, ನಾನು[yy]ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲ. 25 ಆದರೆ[zz]ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ. 26-28 []ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು[]ಕಡೆಯವರೆಗೂ ನಡಿಸುತ್ತಾನೋ,[]ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.[]‘ಅವನು[]ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು,[]ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ[]ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು. 29 []ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.

<- ಪ್ರಕಟಣೆ 1ಪ್ರಕಟಣೆ 3 ->