Link to home pageLanguagesLink to all Bible versions on this site
4
[a]ಸ್ವರ್ಗೀಯ ಆರಾಧನೆ
1 ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು [b]ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, [c]“ಇಲ್ಲಿಗೆ ಏರಿ ಬಾ,[d]ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು. 2 ಕೂಡಲೆ ನಾನು [e]ದೇವರಾತ್ಮವಶನಾದೆನು, ಆಗ ಇಗೋ ಪರಲೋಕದಲ್ಲಿ [f]ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬನು ಕುಳಿತಿದ್ದನು. 3 ಕುಳಿತಿದ್ದವನು ಕಣ್ಣಿಗೆ [g]ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ [h]ಕಾಮನಬಿಲ್ಲು ಇತ್ತು. 4 ಇದಲ್ಲದೆ ಸಿಂಹಾಸನದ ಸುತ್ತಲೂ [i]ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ [j]ಶುಭ್ರವಸ್ತ್ರ ಧರಿಸಿಕೊಂಡಿದ್ದ [k]ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. [l]ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು. 5 ಸಿಂಹಾಸನದಿಂದ [m]ಮಿಂಚು, ಗುಡುಗು, ಗರ್ಜನೆಗಳು ಹೊರ ಹೊಮ್ಮುತ್ತಿದ್ದವು. ಆ ಸಿಂಹಾಸನ ಮುಂದೆ [n]ದೇವರ ಏಳು ಆತ್ಮಗಳನ್ನು ಸೂಚಿಸುವ [o]ಏಳು ದೀಪಗಳು ಉರಿಯುತ್ತಿದ್ದವು. 6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ [p]ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ [q]ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. 7 ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು. 8 ಆ ನಾಲ್ಕು ಜೀವಿಗಳಿಗೆ [r]ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. [s]ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ,
[t]“ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು,
[u]ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.

9 ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ, 10-11 ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ [v]ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ [w]ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, [x] ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. [y]ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

<- ಪ್ರಕಟಣೆ 3ಪ್ರಕಟಣೆ 5 ->