1 ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ. 2 [a]ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ. 3 [b]ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ. 4 ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು. 5 ಧರ್ಮಶಾಸ್ತ್ರದ ನೀತಿಯನುಸಾರ, [c]“ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ. 6 ಆದರೆ [d]ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. [e]“ ‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’ 7 ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’ ” ಆದರೆ ಅದು ಏನನ್ನು ಹೇಳುತ್ತದೆ. 8 “ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ. 9 ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು [f]ಬಾಯಿಂದ ಅರಿಕೆಮಾಡಿಕೊಂಡು [g]ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ. 10 ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ. 11 [h]“ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ. 12 ಈ ವಿಷಯದಲ್ಲಿ [i]ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. [j]ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ. 13 ಆದ್ದರಿಂದ[k] ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
- a ಅ. ಕೃ. 21:20
- b ರೋಮಾ. 1:17
- c ಯಾಜ 18:5; ಯೆಹೆ. 20:11,13; ಮತ್ತಾ 19:17; ಲೂಕ 10:28; ಗಲಾ. 3:12
- d ರೋಮಾ. 9:30
- e ಧರ್ಮೋ 30:12-14
- f ಮತ್ತಾ 10:32; ಲೂಕ 12:8
- g ಅ. ಕೃ. 2:24; 1 ಪೇತ್ರ 1:21
- h ಯೆಶಾ 28:16; ರೋಮಾ. 9:33
- i ರೋಮಾ. 3:22,29
- j ಅ. ಕೃ. 10:36
- k ಯೋವೇ. 2:32; ಅ. ಕೃ. 2:21
- l ಯೆಶಾ 52:7; ನಹೂ. 1:15
- m ಇಬ್ರಿ. 4:2
- n ಯೆಶಾ 53:1; ಯೋಹಾ 12:38
- o ಕೀರ್ತ 19:4
- p ಧರ್ಮೋ 32:21
- q ಯೆಶಾ 65:1
- r ಯೆಶಾ 65:2