1 ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು? 2 ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ [a]ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ. 3 [b]ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ. 4 ಬದಲಾಗಿ,
5 ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. [e]ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ. 6 ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ? 7 ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ? 8 [f]“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
19 ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. [o]ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು. 20 ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. [p]ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
27 [v]ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ. 28 [w]ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ 29 [x]ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು [y]ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ. 30 ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ [z]ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ. 31 ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.
<- ರೋಮಾಪುರದವರಿಗೆ 2ರೋಮಾಪುರದವರಿಗೆ 4 ->- a ಧರ್ಮೋ 4:8, ಕೀರ್ತ 147:19-20, ಅ. ಕೃ. 7:38
- b ರೋಮಾ. 10:16
- c ಕೀರ್ತ 51:4
- d ಕೀರ್ತ 62:9
- e ರೋಮಾ. 6:19, 1 ಕೊರಿ 9:8, ಗಲಾ. 3:15
- f ರೋಮಾ. 6:1,15
- g ರೋಮಾ. 2:1-29
- h ರೋಮಾ. 1:18-32
- i ಕೀರ್ತ 14:1-3, 53:1-3
- j ಕೀರ್ತ 5:9
- k ಕೀರ್ತ 140:3
- l ಕೀರ್ತ 10:7
- m ಜ್ಞಾ. 1:16, ಯೆಶಾ 59:7-8
- n ಕೀರ್ತ 36:1
- o ಆದುದರಿಂದ ಎಲ್ಲರ ಬಾಯಿ ಕಟ್ಟಿತು, ಲೋಕದವರೆಲ್ಲರು ದೇವರ ಮುಂದೆ ಅಪರಾಧಿಗಳಾದರು, ಕೀರ್ತ 63:11, 107:42, 143:2
- p ಅಥವಾ, ಧರ್ಮಶಾಸ್ತ್ರದ ನಿಯಮಗಳಿಂದ
- q ದೇವರಿಗೆ ಮೆಚ್ಚುಗೆಯಾಗಿರುವ, ರೋಮಾ. 1:17
- r ಅ. ಕೃ. 10:43
- s ರೋಮಾ. 3:9
- t ತೀತ. 3:7
- u ಎಫೆ 1:7, ಕೊಲೊ 1:14, ಇಬ್ರಿ. 9:15
- v ರೋಮಾ. 2:17,23; 1 ಕೊರಿ 1:29-31, ಎಫೆ 2:9
- w ಈ ವಚನದೊಂದಿಗೆ ಯಾಕೋಬ 2:18 ಹೋಲಿಸಿ
- x ರೋಮಾ. 9:24, 10:12, 15:9, ಗಲಾ. 3:28
- y ಗಲಾ. 3:20
- z ಗಲಾ. 3:8