3 ದಾವೀದನು ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡನು. ಇನ್ನೂ ಹೆಚ್ಚು ಪುತ್ರ, ಪುತ್ರಿಯರನ್ನೂ ಪಡೆದನು. 4 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್, 5 ಇಬ್ಹಾರ್, ಎಲೀಷೂವ, ಎಲ್ಪೆಲೆಟ, 6 ನೋಗಹ, ನೆಫೆಗ್, ಯಾಫೀಯ, 7 ಎಲೀಷಾಮ, ಎಲ್ಯಾದ[a], ಎಲೀಫೆಲೆಟ್.
11 ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್[b] ಎಂದು ಹೆಸರಿಟ್ಟನು. 12 ಅಲ್ಲಿ ಫಿಲಿಷ್ಟಿಯರು ತಮ್ಮ ದೇವರುಗಳನ್ನು ಬಿಟ್ಟು ಹೋದುದರಿಂದ, ದಾವೀದನು ಅವುಗಳನ್ನು ಸುಟ್ಟುಹಾಕಬೇಕೆಂದು ಅಪ್ಪಣೆಮಾಡಿದನು.
13 ಫಿಲಿಷ್ಟಿಯರು ಮತ್ತೆ ತಿರುಗಿಬಂದು ತಗ್ಗಿನಲ್ಲಿ ಸುಲಿಗೆಮಾಡಲು ಪ್ರಾರಂಭಿಸಿದರು. 14 ಆದ್ದರಿಂದ ದಾವೀದನು ತಿರುಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಹಿಂದೆ ಹೋಗದೆ, ಅವರನ್ನು ಬಿಟ್ಟು ತಿರುಗಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು. 15 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು. 16 ಆಗ ದಾವೀದನು, ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗಿಬ್ಯೋನಿನಿಂದ ಗೆಜೆರಿನವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದರು.
17 ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು.
<- 1 ಪೂರ್ವಕಾಲ ವೃತ್ತಾಂತ 131 ಪೂರ್ವಕಾಲ ವೃತ್ತಾಂತ 15 ->