3 ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು, 4 ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು. 5 ಕೇಫನಿಗೂ[a] ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿಕೊಂಡರು. 6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ. 7 ತರುವಾಯ ಕ್ರಿಸ್ತ ಯೇಸು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡರು. 8 ಕಟ್ಟಕಡೆಗೆ, ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.
9 ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು. 10 ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ. 11 ಆದ್ದರಿಂದ ನಾನಾದರೇನು, ಅವರಾದರೇನು ಇದನ್ನೇ ನಾವು ಸಾರುವುದು, ಇದನ್ನೇ ನೀವು ನಂಬಿದ್ದೀರಿ.
20 ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ. 21 ಏಕೆಂದರೆ ಒಬ್ಬ ಮನುಷ್ಯನ ಮೂಲಕ ಮರಣವು ಬಂದಂತೆಯೇ, ಒಬ್ಬ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವು ಸಹ ಬರುವುದು. 22 ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು. 23 ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು. 24 ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. 25 ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ. 26 ಕೊನೆಯದಾಗಿ, ನಿರ್ಮೂಲವಾಗುವ ವೈರಿ ಮರಣವೇ. 27 ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿ ಅವರಿಗೆ ಅಧೀನಮಾಡಿದ್ದಾರೆ. “ಸಮಸ್ತವೂ ಅವರಿಗೆ ಅಧೀನ ಮಾಡಲಾಗಿದೆ”[b] ಎಂದು ಹೇಳುವಾಗ, ಸಮಸ್ತವನ್ನೂ ಕ್ರಿಸ್ತನಿಗೆ ಅಧೀನಮಾಡಿಕೊಟ್ಟ ದೇವರು ಇದರಲ್ಲಿ ಒಳಪಡಲಿಲ್ಲ ಎಂಬುದು ಸ್ಪಷ್ಟವಾಗಿದೆ. 28 ಸಮಸ್ತವೂ ಅವರಿಗೆ ಅಧೀನವಾದ ಮೇಲೆ, ಮಗನೂ ಸಹ ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟ ದೇವರಿಗೆ ತಾವೇ ಅಧೀನರಾಗುವರು. ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.
29 ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ನಿಜವಾಗಿಯೂ ಎದ್ದುಬರುವುದಿಲ್ಲವಾದರೆ, ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದು ಏಕೆ? 30 ನಾವು ಸಹ ಪ್ರತಿ ಗಳಿಗೆಯಲ್ಲಿಯೂ ಅಪಾಯದಲ್ಲಿರುವುದೇಕೆ? 31 ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ. 32 ನಾನು ಎಫೆಸದಲ್ಲಿ ಕಾಡು ಮೃಗಗಳೊಂದಿಗೆ ಹೋರಾಟ ಮಾಡಿದ್ದು ಕೇವಲ ಮಾನವ ಕಾರಣಗಳಿಂದ ಮಾತ್ರವಾಗಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರು ಎದ್ದುಬರುವುದಿಲ್ಲವಾದರೆ,
42 ಸತ್ತವರಿಗಾಗುವ ಪುನರುತ್ಥಾನವು ಸಹ ಹಾಗೆಯೇ ಇರುವುದು. ದೇಹವು ಅಳಿಯುವ ಅವಸ್ಥೆಯಲ್ಲಿ ಬಿತ್ತಲಾಗುತ್ತದೆ. ಅಮರತ್ವ ಅವಸ್ಥೆಯಲ್ಲಿ ಎದ್ದು ಬರುವುದು. 43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲಾಗುತ್ತದೆ. ಮಹಿಮೆಯಲ್ಲಿ ಎದ್ದು ಬರುವುದು. ಬಲಹೀನತೆಯಲ್ಲಿ ಬಿತ್ತಲಾಗುತ್ತದೆ, ಶಕ್ತಿಯಲ್ಲಿ ಎದ್ದು ಬರುವುದು. 44 ಪ್ರಾಕೃತ ದೇಹವಾಗಿ ಬಿತ್ತಲಾಗುತ್ತದೆ, ಆತ್ಮಿಕ ದೇಹವಾಗಿ ಎದ್ದು ಬರುವುದು.
50 ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು. 51 ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು. 52 ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು. 53 ಅಳಿಯುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು, ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು. 54 ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.”[e]
58 ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.
<- 1 ಕೊರಿಂಥದವರಿಗೆ 141 ಕೊರಿಂಥದವರಿಗೆ 16 ->